Friday, April 26, 2024
spot_imgspot_img
spot_imgspot_img

ಅಪಾರ್ಟ್‌‌ಮೆಂಟ್‌ ಒಳಗೆ ವಿದ್ಯುತ್ ಶಾಕ್‌ ತಗುಲಿ ಕಾರ್ಮಿಕರಿಬ್ಬರು ದುರ್ಮರಣ

- Advertisement -G L Acharya panikkar
- Advertisement -

ಅಪಾರ್ಟ್‌‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಬಳಿ ಇರುವ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್‌‌ಮೆಂಟ್‌ನಲ್ಲಿ ನಡೆದಿದೆ. ಅಸ್ಸಾಂ ಮೂಲದ ದಿಲೀಪ್ ಹಾಗೂ ಮಧುಗಿರಿ ಮೂಲದ ರಘು ಮೃತ ದುರ್ದೈವಿಗಳು.

ಅಪಾರ್ಟ್‌‌ಮೆಂಟ್ ಒಳಗೆ ಒಳಚರಂಡಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.

ಮೃತರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!