Thursday, April 25, 2024
spot_imgspot_img
spot_imgspot_img

ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ; ವಿಡಿಯೋ ರೆಕಾರ್ಡ್ – ಲೈಂಗಿಕ ದೌರ್ಜನ್ಯ.!

- Advertisement -G L Acharya panikkar
- Advertisement -

ಅಪ್ರಾಪ್ತೆ ಮೇಲೆ 8 ಜನ ಕಾಮುಕರು ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

16 ವರ್ಷದ ಅಪ್ರಾಪ್ತೆ ಮೇಲೆ 8 ಜನ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದಾರೆ. ಮೊದಲು ವಿಡಿಯೋ ರೆಕಾರ್ಡ್ ಮಾಡಿ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ವಿಚಾರ ಹೊರಗೆ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ.

ಸಂತ್ರಸ್ತ ಬಾಲಕಿ ತನ್ನ ಪೋಷಕರ ಬಳಿ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ತಿಳಿಸಿದ್ದು, ಗಾಬರಿಯಾದ ಪೋಷಕರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ದೂರಿನ ಅನ್ವಯ 7 ಜನ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!