Friday, April 19, 2024
spot_imgspot_img
spot_imgspot_img

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ.!

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಅಪ್ರಾಪ್ತೆ ಮೇಲೆ ಆಕೆಯ ಮಲ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಗ್ರಾಮವೊಂದರಲ್ಲಿ ನಡೆದೆ.

ಈ ಕೃತ್ಯವೆಸಗಿದ ಆರೋಪಿ ಕೃಷ್ಣ (34) . ಈತನ ಪತ್ನಿ ಕೂಲಿ ಕೆಲಸಕ್ಕೆ ಹೋದಾಗ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಳೆದ 5 ತಿಂಗಳಿನಿಂದ 7 ಬಾರಿ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ಈ ಕುರಿತು ಯಾರಿಗೂ ಹೇಳದಂತೆ ಆರೋಪಿ ಕೃಷ್ಣ ಬಾಲಕಿಗೆ ಬೆದರಿಕೆ ಹಾಕಿದ್ದ. ಅಲ್ಲದೆ, ಇತ್ತೀಚೆಗೆ ತಾಯಿಗೆ ಈ ವಿಚಾರ ಗೊತ್ತಾಗಿ, ಗಂಡನನ್ನು ಪ್ರಶ್ನಿಸಿದ್ದಕ್ಕೆ ಆಕೆಯ ಮೇಲೆಯೂ ಹಲ್ಲೆ ನಡೆಸಿದ್ದಾನೆ. ಈ ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!