Monday, May 6, 2024
spot_imgspot_img
spot_imgspot_img

ಅಮಾಯಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ; ಇಬ್ಬರು ಕಾನ್‌ಸ್ಟೇಬಲ್‌ಗಳು ಸಸ್ಪೆಂಡ್‌

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಮೂಡಿಗೆರೆ‌ ಠಾಣೆಯಲ್ಲಿ ಅಮಾಯಕನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ದೂರು ಕೇಳಿಬಂದಿದ್ದು, ಇದರನ್ನು ಆಧಾರಿಸಿ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿರುವ ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.

ದಾರದಹಳ್ಳಿ ನಿವಾಸಿ ಮಂಜು ಎಂಬುವವರ ಮೇಲೆ ಮೂಡಿಗೆರೆ ಪೊಲೀಸರು ಹಲ್ಲೆ ಮಾಡಿದ್ದರೆಂಬ ಆರೋಪವಿತ್ತು. ಇದೀಗ ಮೂಡಿಗೆರೆ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ಗಳಾದ ವಸಂತ್, ಲೋಹಿತ್ ಅಮಾನತಗಿದ್ದಾರೆ. ಮೂಡಿಗೆರೆ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆದರ್ಶ್ ವಿರುದ್ಧ ಇಲಾಖೆ ತನಿಖೆಗೆ ಆದೇಶವನ್ನೂ ನೀಡಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ದಾರದಹಳ್ಳಿ ನಿವಾಸಿಯಾಗಿರುವ ಮಂಜು ಎಂಬಾತನ ಮೇಲೆ ಕಳ್ಳತನದ ಆರೋಪದ ಮೇಲೆ ಠಾಣೆಗೆ ಕರೆ ತಂದಿದ್ದ ಪೊಲೀಸರು ಮನಸೋ ಇಚ್ಛೆ ಠಾಣೆಯಲ್ಲಿ ಥಳಿಸಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಮಂಜು ಪತ್ನಿ ಯಶೋಧ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್‌ಗೆ ದೂರು ನೀಡಿದ್ದರು.

ಗಂಭೀರವಾಗಿ ಹಲ್ಲೆಗೊಳಗಾದ ಮಂಜು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Related news

error: Content is protected !!