Friday, June 5, 2026
spot_imgspot_img
spot_imgspot_img

ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವು!

- Advertisement -
- Advertisement -

ಮಡಿಕೇರಿ: ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮತ್ತಿಗೋಡು ಆನೆ ಶಿಬಿರದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ದಿಲೀಶ್ (27) ಎನ್ನಲಾಗಿದೆ. ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರನಾಗಿದ್ದರು.

ನೇಣು ಬಿಗಿದ ಸ್ಥಿತಿಯಲ್ಲಿ ದಿಲೀಶ್ ಶವ ಪತ್ತೆಯಾಗಿದ್ದು, ನೆಲದಲ್ಲಿ ಅಂಗಾತ ಬಿದ್ದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಘಟನೆಯಿಂದ ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!