Sunday, May 19, 2024
spot_imgspot_img
spot_imgspot_img

ಅರವಿಂದ್ ಕೇಜ್ರಿವಾಲ್ ಉಪಸ್ಥಿತಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

- Advertisement -G L Acharya panikkar
- Advertisement -

ಬೆಂಗಳೂರು: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಉಪಸ್ಥಿತಿಯಲ್ಲಿ ನಡೆದ ಬೃಹತ್ ರೈತ ಸಮಾವೇಶದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಮ್ ಆದ್ಮಿ ಪಾರ್ಟಿ ಸೇರಿದರು.

vtv vitla
vtv vitla

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ‘ರೈತರ ಭಾವನೆಗಳಿಗೆ ರಾಜಕೀಯವಾಗಿ ಶಕ್ತಿ ಸಿಗಬೇಕಾದರೆ ಯಾವ ಪಕ್ಷವನ್ನು ಬೆಂಬಲಿಸಬೇಕು ಎಂಬ ಗೊಂದಲದಲ್ಲಿದ್ದೆವು. ಕರ್ನಾಟಕವನ್ನು ಆಳಿದ ಮೂರೂ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿಯಿಲ್ಲ ಎಂಬುದು ಸಾಬೀತಾಗಿದೆ. ಈಗ ನಾಡಿನ ರೈತರಿಗೆ ಭರವಸೆಯ ಬೆಳಕಾಗಿ ಅರವಿಂದ್ ಕೇಜಿವಾಲ್ ಎಂಬ ನಾಯಕ ಹಾಗೂ ಆಮ್ ಆದ್ಮ ಪಾರ್ಟಿ ಎಂಬ ಪಕ್ಷ ಸಿಕ್ಕಿದೆ. ಇವರ ಪ್ರಾಮಾಣಿಕತೆ ಹಾಗೂ ಜನಸಾಮಾನ್ಯರ ಬಗೆಗಿನ ಕಾಳಜಿಯಿಂದ ನಾಡಿನ ರೈತರಿಗೆ ಒಳ್ಳೆಯದಾಗಲಿದೆ. ಇವರು ದೆಹಲಿಯಲ್ಲಿ ಸಾಧಿಸಿ ತೋರಿಸಿದ್ದಾರೆ,” ಎಂದು ಹೇಳಿದರು.

“ಕೃಷಿ ಭೂಮಿಯು ಉದ್ಯಮಿಗಳ ಪಾಲಾಗುವಂತೆ ಮಾಡಿ, ರೈತರು ಹಾಗೂ ಕೃಷಿ ಕಾರ್ಮಿಕರ ಉದ್ಯೋಗ ಕಿತ್ತುಕೊಳ್ಳಲು ಸರ್ಕಾರವು ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ಮಾಡಿದೆ. ಎಪಿಎಂಸಿ ಕಾಯಿದೆ, ಜಾನುವಾರು ಕಾಯಿದೆಗೆ ತಿದ್ದುಪಡಿ ತಂದಿರುವುದರಿಂದ ಕೂಡ ರೈತರೇ ತೊಂದರೆ ಅನುಭವಿಸಲಿದ್ದಾರೆ. ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಕೂಡ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ನಾವು ಹಲವು ತಿಂಗಳಿಂದ ಆಗ್ರಹಿಸುತ್ತಿದ್ದೇವೆ. ಆದರೆ ರೈತರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲದ ಸಿಎಂ ಬಸವರಾಜ್ ಬೊಮ್ಮಾಯಿ ಇದನ್ನು ಅಧಿವೇಶನದಿಂದ ಅಧಿವೇಶನಕ್ಕೆ ಮುಂದೂಡುತ್ತಲೇ ಇದ್ದಾರೆ,” ಎಂದು ಬೇಸರ ವ್ಯಕ್ತಪಡಿಸಿದರು.

vtv vitla
vtv vitla
- Advertisement -

Related news

error: Content is protected !!