Monday, May 6, 2024
spot_imgspot_img
spot_imgspot_img

ಅರ್ಧ ಗಂಟೆಯಲ್ಲಿ ಫುಲ್ ಚಾರ್ಜ್ ಆಗುವ ಒನ್​ಪ್ಲಸ್ 10 ಪ್ರೊ ಇಂದಿನಿಂದ ಖರೀದಿಗೆ ಲಭ್ಯ

- Advertisement -G L Acharya panikkar
- Advertisement -

ಕಳೆದ ವಾರ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿ ಧೂಳೆಬ್ಬಿಸುತ್ತಿರುವ ಪ್ರಸಿದ್ಧ ಒನ್​ಪ್ಲಸ್ ಕಂಪನಿಯ ಬಹುನಿರೀಕ್ಷಿತ ಒನ್​ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಸ್ಮಾರ್ಟ್​​ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ. ಈ ಸ್ಮಾರ್ಟ್‌ಫೋನ್‌ ಅತ್ಯಂತ ಬಲಿಷ್ಠವಾದ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಹೊಂದಿದ್ದು, ನಾಲ್ಕು ಪಟ್ಟು ವೇಗದ ಕೃತಕ ಬುದ್ಧಿಮತ್ತೆ (AI) ಸಂಸ್ಕರಣೆ ಮತ್ತು ಕೊನೆಯ ತಲೆಮಾರಿನ ಸ್ನಾಪ್‌ಡ್ರಾಗನ್ ಚಿಪ್‌ಗಿಂತ 25% ಹೆಚ್ಚು ಪರಿಣಾಮಕಾರಿ ಗ್ರಾಫಿಕ್ಸ್ ಕಾರ್ಯಕ್ಷಮತೆಯನ್ನು ನೀಡಲಿದೆ. ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಅಮೆಜಾನ್ (Amazon) ಮತ್ತು ಒನ್​ಪ್ಲಸ್ ಕಂಪನಿಯ ಅಧಿಕೃತ ವೆಬ್​ಸೈಟ್​ನಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ಮಾರಾಟ ಆಗಲಿದೆ. ಈ ಫೋನ್​ನ ಪ್ರಮುಖ ಹೈಲೇಟ್ 5,000mAh ಡ್ಯುಯಲ್‌ ಸೆಲ್‌ ಬ್ಯಾಟರಿ, ಹೊಸ ವೈರ್ಡ್ ಚಾರ್ಜಿಂಗ್ ಟೆಕ್ನಾಲಜಿ ಆಗಿದ್ದು ಇದು 32 ನಿಮಿಷಗಳಲ್ಲಿ ಶೂನ್ಯದಿಂದ 100% ಚಾರ್ಜ್ ಮಾಡಲಿದೆ ಎಂದು ಕಂಪನಿ ಹೇಳಿದೆ.

ಬೆಲೆ ಎಷ್ಟು?- ಆಫರ್ ಏನು?:

ಭಾರತದಲ್ಲಿ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಒಟ್ಟು ಎರಡು ಮಾದರಿಯಲ್ಲಿ ಖರೀದಿಗೆ ಸಿಗಲಿದೆ. ಇದರ ಬೇಸ್ ಮಾಡೆಲ್‌ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 66,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM ಮತ್ತು 256GB ಸ್ಟೋರೇಜ್ ಮಾಡೆಲ್‌ ಆಯ್ಕೆಗೆ 71,999 ರೂ. ಬೆಲೆ ಇದೆ. ಇದು ಎಮರಾಲ್ಡ್ ಫಾರೆಸ್ಟ್ ಮತ್ತು ವೊಲ್ಕ್ಯಾನಿಕ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಫೋನನ್ನು ನೀವು ಎಸ್​ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 4,500 ರೂ. ಗಳ ಇನ್​ಸ್ಟಾಂಟ್ ಡಿಸ್ಕೌಂಟ್ ಸಿಗಲಿದೆ. ನಿಮ್ಮ ಹಳೆಯ ಫೋನ್​ಗೆ 5,000 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದೆ. ಅಲ್ಲದೆ ಒನ್​​ಪ್ಲಸ್ ಕಂಪನಿಯ ಹಳೆಯ ಮೊಬೈಲ್ ಇದ್ದರೆ ಸುಮಾರು 2,000 ರೂ. ವರೆಗೆ ರಿಯಾಯಿತಿ ಪಡೆಯಬಹುದು.

ಏನು ವಿಶೇಷತೆ?:

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ ಇದು 1,440×3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ sRGB ಬಣ್ಣದ ಹರವುಗಳನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದಿದೆ. ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಆಕ್ಸಿಜನ್‌ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದರ ಜೊತೆಗೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಗಳನ್ನು ನೀಡಲಾಗಿದೆ.

- Advertisement -

Related news

error: Content is protected !!