Monday, April 29, 2024
spot_imgspot_img
spot_imgspot_img

ಅಶ್ಲೀಲ ಚಿತ್ರಗಳ ನಿರ್ಮಾಣ ಕೇಸ್​; 2 ತಿಂಗಳ ಬಳಿಕ ಶಿಲ್ಪಾ ಶೆಟ್ಟಿ ಪತಿ ರಾಜ್​​ಕುಂದ್ರಾಗೆ ಜಾಮೀನು

- Advertisement -G L Acharya panikkar
- Advertisement -

ನವದೆಹಲಿ: ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಉದ್ಯಮಿ ರಾಜ್‌ ಕುಂದ್ರಾಗೆ ಜಾಮೀನು ಸಿಕ್ಕಿದೆ.

ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹಾಗೂ ರಯಾನ್ ಥಾರ್ಪ್‌ಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂಪಾಯಿಗಳ ಶ್ಯೂರಿಟಿ ಮೇರೆಗೆ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ.

ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ. ಅಶ್ಲೀಲ ಚಿತ್ರಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಯಾವುದೇ ಸಾಕ್ಷ್ಯ ಸಪ್ಲಿಮೆಂಟರಿ ಚಾರ್ಜ್‌ಶೀಟ್‌ನಲ್ಲಿಲ್ಲ ಎಂದು ಜಾಮೀನಿಗೆ ಮನವಿ ಮಾಡಿ ನ್ಯಾಯಾಲಯಕ್ಕೆ ರಾಜ್ ಕುಂದ್ರಾ ಅರ್ಜಿ ಸಲ್ಲಿಸಿದ್ದರು. ನಿನ್ನೆ ರಾಜ್ ಕುಂದ್ರಾಗೆ ಜಾಮೀನು ಸಿಕ್ಕಿದೆ.

driving
- Advertisement -

Related news

error: Content is protected !!