Friday, April 26, 2024
spot_imgspot_img
spot_imgspot_img

ಅಸಾನಿ ಚಂಡಮಾರುತ ಪರಿಣಾಮ; ಕರಾವಳಿಯಲ್ಲಿ ಮೂರು ದಿನ ಮಳೆ ಮುಂದುವರಿಕೆ – ಹಲವೆಡೆ ಯೆಲ್ಲೋ ಎಲರ್ಟ್.!

- Advertisement -G L Acharya panikkar
- Advertisement -

ಅಸಾನಿ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದಿಂದ ಕೂಡಿದ ಗಾಳಿ, ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುವಾಗಿ ಪರಿವರ್ತನೆಯಾಗಲಿದ್ದು, ಇದರ ಪರಿಣಾಮ ಬಿರು ಬೇಸಿಗೆಯಲ್ಲಿ ಮಳೆ ಸುರಿಯಲು ಕಾರಣವಾಗುತ್ತಿದೆ. ಕಳೆದ ನಾಲ್ಕು ದಿನಗಳಿಂದ ಅಸಾನಿ ಚಂಡಮಾರುತದಿಂದಾಗಿ ನಿರಂತರ ಮಳೆ ಸುರಿಯುತ್ತಿದೆ. ನೆರೆಯ ಆಂಧ್ರ, ತಮಿಳುನಾಡು, ಒಡಿಶಾ ರಾಜ್ಯಗಳಲ್ಲಿ ಭಾನುವಾರದಿಂದಲೇ ತೀವ್ರ ಮಳೆ ಸುರಿಯುತ್ತಿದೆ.

ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಯಾಗಿದ್ದು, ಜನ ಕೊಡೆ, ರೈನ್ ಕೋಟ್ ಹಿಡಿದೇ ನಡೆದಾಡುವುದು, ಸಂಚರಿಸುವುದು ಮಾಡುತ್ತಿದ್ದಾರೆ.

Heavy rain lashes Chennai, causes traffic snarls, flooding; IMD issues red  alert | Latest News India - Hindustan Times

ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತದ ವೇಗ ಅಧಿಕವಿರುವ ಪರಿಣಾಮ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಚಿತ್ರದುರ್ಗ, ತುಮಕೂರು, ಬಳ್ಳಾರಿ, ದಾವಣಗೆರೆ, ಚಾಮರಾಜನಗರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮುಂತಾದೆಡೆ ಬಿರುಸಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈಗಾಗಲೇ ‌ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

- Advertisement -

Related news

error: Content is protected !!