Thursday, March 28, 2024
spot_imgspot_img
spot_imgspot_img

ಆಟವಾಡಿಕೊಂಡಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು

- Advertisement -G L Acharya panikkar
- Advertisement -
suvarna gold

ಭೂಪಾಲ್: ಕಾಮಕ್ಕೆ ಕಣ್ಣಿಲ್ಲ ಎಂಬುದು ಸಾರ್ವಕಾಲಿಕ ಸತ್ಯ. ಮನೆಯ ತುಂಬ ಆಟವಾಡಿಕೊಂಡು ಇರುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯಲ್ಲೇ ಅಮಾನುಷವಾಗಿ ಅತ್ಯಾಚಾರ ನಡೆಸಲಾಗಿದೆ. ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಿರ್ದಯವಾಗಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಅಲ್ಲದೆ, ಆ ಬಾಲಕಿಯ ಶವವನ್ನು ಮನೆಯ ಚಾವಣಿಯ ಮೇಲೆ ಅಡಗಿಸಿ ಇಡಲಾಗಿದೆ.

vtv vitla
vtv vitla

ಹೋಶಂಗಾಬಾದ್​ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಸೊಹಾಗ್‌ಪುರ ಪ್ರದೇಶದಲ್ಲಿರುವ ಬಾಲಕಿಯ ಮನೆಯ ಚಾವಣಿಯ ಮೇಲೆ ಬಟ್ಟೆಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ ಎಂದು ಸೊಹಾಗ್‌ಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ರಜಾಕ್ ತಿಳಿಸಿದ್ದಾರೆ.

ಭಾನುವಾರ ರಾತ್ರಿ ಆ ಬಾಲಕಿಯ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿರುವುದು ದೃಢಪಟ್ಟಿದೆ. ಅತ್ಯಾಚಾರ ನಡೆಸಿದ ನಂತರ ಆಕೆಯ ಕತ್ತು ಹಿಸುಕಿ ಸಾಯಿಸಲಾಗಿದೆ ಎಂದು ವರದಿಯಲ್ಲಿ ದೃಢಪಟ್ಟಿದೆ.

ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುವ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಈ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಕಾಮುಕರು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. 5 ವರ್ಷದ ಬಾಲಕಿಯ ಮೇಲೆ ನಡೆದ ಈ ಭೀಕರ ಕೃತ್ಯಕ್ಕೆ ಇಡೀ ಮಧ್ಯಪ್ರದೇಶವೇ ಆಘಾತಗೊಂಡಿದೆ.

ಶನಿವಾರ ಮಧ್ಯಾಹ್ನ 5 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಆಕೆಯ ಕುಟುಂಬಸ್ಥರು ಆಕೆಗಾಗಿ ಹುಡುಕಾಟ ನಡೆಸಿದ್ದರೂ ಆಕೆಯ ಸುಳಿವು ಸಿಕ್ಕಿರಲಿಲ್ಲ. ಆಕೆಯು ತಮ್ಮ ಊರಿನಲ್ಲೆಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಕುಟುಂಬದ ಸದಸ್ಯರು ಅವರ ಮನೆಯ ಮೇಲ್ಛಾವಣಿಯನ್ನು ಪರಿಶೀಲಿಸಿದಾಗ ಅಲ್ಲಿ ಬಟ್ಟೆಯಲ್ಲಿ ಸುತ್ತಿಟ್ಟಿದ್ದ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ಅತ್ಯಾಚಾರ ನಡೆಸಿ ಕೊಲೆ ಮಾಡಿದ ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!