Tuesday, August 4, 2026
spot_imgspot_img
spot_imgspot_img

ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಕುಸಿದು ಸಾವು; ಬಾಲಕಿಯ ಜೀವ ತೆಗೆದ ಮಿಕ್ಷರ್..!

- Advertisement -
- Advertisement -

ತಿರುವನಂತಪುರಂ: ಗಂಟಲಲ್ಲಿ ಮಿಕ್ಷರ್ ಸಿಕ್ಕಿಹಾಕಿಕೊಂಡು ಬಾಲಕಿಯೋರ್ವಳು ಮೃತಪಟ್ಟ ದಾರುಣ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ.

ಕೇರಳದ ತಿರುವನಂತಪುರಂನ ಕಾಟನ್ಹಿಲ್ ಶಾಲೆಯ ವಿದ್ಯಾರ್ಥಿನಿ ನಿವೇದಿತಾ ಮೃತಪಟ್ಟ ಬಾಲಕಿಯಾಗಿದ್ದು, ಈಕೆ ಆಟೋ ಚಾಲಕ ರಾಜೇಶ್ ಎಂಬವರ ಏಕೈಕ ಪುತ್ರಿಯಾಗಿದ್ದಾಳೆ.

ನಿನ್ನೆ ರಾತ್ರಿ ಮನೆಯೊಳಗೆ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಇದರಿಂದ ಆತಂಕಗೊಂಡ ಕುಟುಂಬಸ್ಥರು ತಕ್ಷಣವೇ ಬಾಲಕಿಯನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಬಾಲಕಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾಳೆ.

ಆಟವಾಡುತ್ತಾ, ಬಾಲಕಿ ಮಿಕ್ಷರ್ ತಿನ್ನುತ್ತಿದ್ದಳು ಎಂದು ಹೇಳಲಾಗಿದೆ. ಇದರಿಂದಾಗಿ ಗಂಟಲಲ್ಲಿ ಮಿಕ್ಷರ್ ಸಿಕ್ಕಿಹಾಕಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಗುವನ್ನು ಕಳೆದುಕೊಂಡಿರುವ ಪೋಷಕರ ರೋದನೆ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!