Saturday, April 20, 2024
spot_imgspot_img
spot_imgspot_img

ಆಯೋಧ್ಯೆಗೆ ಹೊರಟ ಬಸ್ಸು ಭೀಕರ ಅಪಘಾತ; ಕರ್ನಾಟಕದ 7 ಮಂದಿ ಸಾವು

- Advertisement -G L Acharya panikkar
- Advertisement -

ಕರ್ನಾಟಕದಿಂದ ಅಯೋಧ್ಯೆಗೆ ಹೊರಟ ಬಸ್ಸು ಉತ್ತರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಕರ್ನಾಟಕದ ಏಳು ಮಂದಿ ಮೃತಪಟ್ಟ ಘಟನೆ ನಡೆದಿದೆ. ಉತ್ತರ ಪ್ರದೇಶದ ಬಹರೈಚ್​ ಹಾಗೂ ಲಖೀಂಪುರ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿದೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು 9 ಮಂದಿಗೆ ಗಂಭೀರ ಗಾಯಗಳಾಗಿವೆ. ಇವರು ಯಾವ ಊರಿನವರು ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಕರ್ನಾಟಕದಿಂದ ಹೊರಟ ಪ್ರವಾಸಿ ಬಸ್​ ಇದಾಗಿತ್ತು. ಮೋತಿಪುರ್ ಪ್ರದೇಶದ ನಾನಿಹಾ ಮಾರುಕಟ್ಟೆಯಲ್ಲಿ ಎದುರಿನ ಲೇನ್‍ಗೆ ಪ್ರವೇಶಿಸಿದಾಗ ಅಪಘಾತ ಸಂಭವಿಸಿದೆ. ಬಸ್​ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!