Friday, April 26, 2024
spot_imgspot_img
spot_imgspot_img

ಆಶ್ರಮದ ಬಾಲಕಿ ಮೇಲೆ ಅತ್ಯಾಚಾರಗೈದ ಪ್ರಕರಣ; ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

- Advertisement -G L Acharya panikkar
- Advertisement -

ಆಶ್ರಮದಲ್ಲಿ ಬಾಲಕಿ ಮೇಲೆ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ ಘೋಷಿತ ದೇವ ಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. 2013ರ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಪತ್ನಿ ಮತ್ತು ಮಗಳನ್ನು ಖುಲಾಸೆಗೊಳಿಸಲಾಗಿದೆ.

2013ರಲ್ಲಿ ನಡೆದ ಪ್ರಕರಣ
ಆಶ್ರಮದ ಶಿಷ್ಯೆಯ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಮ್‌ ಬಾಪು (77) ದೋಷಿ ಎಂದು ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ತೀರ್ಪು ನೀಡಿತ್ತು. ಗಾಂಧಿನಗರ ಸೆಷನ್ಸ್ ಕೋರ್ಟ್​ನ ನ್ಯಾಯಾಧೀಶ ಡಿಕೆ ಸೋನಿ ಅವರು ಅಸಾರಾಮ್‌ ಬಾಪುನನ್ನು ದೋಷಿ ಎಂದು ಪರಿಗಣಿಸಿ ಜೀವಾವಧಿ ಶಿಕ್ಷೆ ಎಂದು ಆದೇಶ ಪ್ರಕಟಿಸಿದ್ದಾರೆ.

ಅಂದೊಮ್ಮೆ ಚಹಾದಂಗಡಿಯಲ್ಲಿ ಎಂಜಲಿನ ಗ್ಲಾಸು ತೊಳೆಯುತ್ತಿದ್ದ ಅಸಾರಾಮ್ ಈಗ ಸರಿ ಸುಮಾರು ಸಾವಿರಾರು ಕೋಟಿ ರೂಪಾಯಿ ಒಡೆಯ. ಅಪ್ರಾಪ್ತೆಯ ಮೇಲೆ ಜೋಧಪುರದ ಆಶ್ರಮದಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲುವಾಸಿಯಾಗಿದ್ದಾರೆ.

ಈ ಹಿಂದೆಯೇ ೨೦೧೩ ಸೆಪ್ಟೆಂಬರ್‍ ತಿಂಗಳಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಗಳಾದ ಅಸಾರಾಂ ಬಾಪು ಮತ್ತು ಇಬ್ಬರು ದೋಷಿಗಳನ್ನು ಇಂದೋರ್‌ನಲ್ಲಿ ಅರೆಸ್ಟ್ ಮಾಡಲಾಗಿತ್ತು. ನಂತರ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿತ್ತು.

- Advertisement -

Related news

error: Content is protected !!