Friday, July 11, 2025
spot_imgspot_img
spot_imgspot_img

ಆಸಿಡ್ ದಾಳಿ ಪ್ರಕರಣ; ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ನೀಡಲಿದೆ- ಆರೋಗ್ಯ ಸಚಿವ ಡಾ.ಸುಧಾಕರ್

- Advertisement -
- Advertisement -

ಬೆಂಗಳೂರು: ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ಸಂತ್ರಸ್ತ ಯುವತಿ ಸ್ಥಿತಿ ಚಿಂತಾಜನಕ | Condition  of the vulnerable young woman who suffered an acid attack in bengaluru |  TV9 Kannada

ಸೆಂಟ್ ಜಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ ಆರೋಗ್ಯ ಸ್ಥಿತಿ ವಿಚಾರಿಸಿ ಮಾತನಾಡಿದ ಅವರು, ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವ ಘಟನೆ ಇದಾಗಿದ್ದು, ರಾಜ್ಯ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಚಿಕಿತ್ಸೆಯ ಎಲ್ಲಾ ಖರ್ಚು ವೆಚ್ಚವನ್ನು ಸರ್ಕಾರವೇ ನೋಡಿಕೊಳ್ಳಲಿದೆ ಎಂದರು.

ಯುವತಿಯ ಮೇಲೆ ಆಸಿಡ್‌ ದಾಳಿ: ನೆಟ್ಟಿಗರ ಆಕ್ರೋಶ

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಇಂದು ಅಥವಾ ನಾಳೆಯೊಳಗೆ ಆರೋಪಿ ಬಂಧಿಸಲಾಗುವುದು. ಸಂತ್ರಸ್ಥ ಯುವತಿ ಭವಿಷ್ಯ ರೂಪಿಸುವ ಸಲುವಾಗಿ ಸರ್ಕಾರಿ ಉದ್ಯೋಗ ನೀಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ ಎಂದಿದ್ದಾರೆ. ಇನ್ನು ಯುವತಿಗೆ ಸ್ಕಿನ್ ಬ್ಯಾಂಕ್ ನಿಂದ ಸ್ಕಿನ್ ನೀಡಲಾಗುವುದು. ನಾಗರಿಕ ಸಮಾಜದಲ್ಲಿ ಹೃದಯ ಕಲಕುವ ಘಟನೆ ಇದಾಗಿದೆ ಎಂದು ಹೇಳಿದ್ದಾರೆ.

vtv vitla
vtv vitla
- Advertisement -

Related news

error: Content is protected !!