Sunday, May 19, 2024
spot_imgspot_img
spot_imgspot_img

ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟರ್ ಶೇನ್​ ವಾರ್ನ್ ನಿಧನ

- Advertisement -G L Acharya panikkar
- Advertisement -

ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

ವಾರ್ನ್ ಅವರು ಥಾಯ್ಲೆಂಡ್‌ನ ವಿಲ್ಲಾದಲ್ಲಿ ನೆಲೆಸಿದ್ದರು. ಅವರು ತಮ್ಮ ವಿಲ್ಲಾದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ವೈದ್ಯಕೀಯ ತಂಡದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ ಎಂದು ವಾರ್ನ್​ ಅವರ ಆಪ್ತ ವಲಯ ಮಾಹಿತಿ ನೀಡಿದೆ.

vtv vitla
vtv vitla

ವಾರ್ನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳು ಹಾಗೂ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಭಾರತದ ಮಾಜಿ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ಟ್ವಿಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ವಾರ್ನ್ 15 ವರ್ಷಗಳಿಂದ ಆಸ್ಟ್ರೇಲಿಯಾ ಪರ ಶ್ರೇಷ್ಠ ಬೌಲರ್ ಆಗಿದ್ದು 708 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಮುತ್ತಯ್ಯ ಮುರಳೀಧರನ್ ನಂತರ ವಿಶ್ವ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡ ಖ್ಯಾತಿ ಶೇನ್ ವಾರ್ನ್​ ಅವರದ್ದು.

- Advertisement -

Related news

error: Content is protected !!