Wednesday, April 24, 2024
spot_imgspot_img
spot_imgspot_img

ಆ.14 ರಂದು ಕಾಮನ್‌ವೆಲ್ತ್ ಗೇಮ್ಸ್‌ ಪದಕ ವಿಜೇತರನ್ನು ಭೇಟಿ ಮಾಡಲಿದ್ದಾರೆ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ಬರ್ಮಿಂಗ್‌ಹ್ಯಾಮ್‌ನಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಆಟಗಾರರು ಅದ್ಭುತ ಪ್ರದರ್ಶನ ನೀಡಿ ಒಟ್ಟು 61 ಪದಕಗಳನ್ನು ಗೆದ್ದಿದ್ದಾರೆ. ಈ ಮೂಲಕ ದೇಶದ ಕೀರ್ತಿ ಪತಾಕೆಯನ್ನು ಆಗಸದೆತ್ತರಕ್ಕೆ ಕೊಂಡೊಯ್ದಿದ್ದಾರೆ. ಕಾಮನ್‌ವೆಲ್ತ್ ಗೇಮ್ಸ್‌ ಆರಂಭಕ್ಕೂ ಮುನ್ನ ಈ ಕ್ರೀಡೆಯಲ್ಲಿ ಭಾಗವಹಿಸುತ್ತಿದ್ದ ಭಾರತದ ಸ್ಪರ್ಧಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದರು. ಈಗ ಕ್ರೀಡಾಕೂಟ ಮುಗಿದಿದ್ದು, ಈ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಸ್ಪರ್ಧಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ತಮ್ಮ ನಿವಾಸದಲ್ಲಿ ಭೇಟಿ ಮಾಡಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಮಾಹಿತಿ ನೀಡಿದೆ.

ಇಂಗ್ಲೆಂಡಿನಲ್ಲಿ ಈ ಕ್ರೀಡಾಕೂಟ ನಡೆಯುತ್ತಿದ್ದಾಗಲೂ ಪ್ರಧಾನಿ ಮೋದಿ ಟ್ವಿಟರ್ ಮೂಲಕ ಪದಕ ಗೆದ್ದ ಆಟಗಾರರನ್ನು ಅಭಿನಂದಿಸಿ ಪ್ರೋತ್ಸಾಹಿಸುತ್ತಿದ್ದರು. ಈ ಹಿಂದೆ, ಟೋಕಿಯೊ ಒಲಿಂಪಿಕ್ಸ್‌ನಿಂದ ಭಾರತ ತಂಡ ಹಿಂದಿರುಗಿದಾಗ, ನರೇಂದ್ರ ಮೋದಿ ಅವರು ಪದಕ ವಿಜೇತರನ್ನು ಭೇಟಿಯಾಗಿದ್ದರು.

- Advertisement -

Related news

error: Content is protected !!