Sunday, May 19, 2024
spot_imgspot_img
spot_imgspot_img

ಇಂಡಿಗೋ ವಿಮಾನದ ಸೀಟ್ ಕೆಳಗೆ ಲಕ್ಷಾಂತರ ಮೌಲ್ಯದ ಚಿನ್ನ ಪತ್ತೆ..!

- Advertisement -G L Acharya panikkar
- Advertisement -
driving

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಇಂಡಿಗೋ ವಿಮಾನದಲ್ಲಿ ಸೀಟ್ ನ ಕೆಳಗೆ ಬರೋಬ್ಬರಿ 61 ಲಕ್ಷ ಮೌಲ್ಯದ ಚಿನ್ನ ಪತ್ತೆಯಾಗಿದ್ದು ಭಾರೀ ಪ್ರಮಾಣದ ಚಿನ್ನದ ಸ್ಮಗ್ಲಿಂಗ್​ ದಂಧೆಯೊಂದು ಬೆಳಕಿಗೆ ಬಂದಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದ ಈ ವಿಮಾನದಲ್ಲಿ ಎಕಾನಮಿ ಕ್ಲಾಸ್ ನ ಸೀಟ್ ಕೆಳಗೆ ಪೊಟ್ಟಣದಲ್ಲಿ 599 ಗ್ರಾಂ ಚಿನ್ನದ ಕಡ್ಡಿ ಮತ್ತು 701 ಗ್ರಾಂ ಚಿನ್ನದ ಪೇಸ್ಟ್ ಪತ್ತೆಯಾಗಿದೆ. ಕಸ್ಟಮ್ ವಿಭಾಗದ ಏರ್ ಇಂಟಲಿಜೆನ್ಸ್ ಯೂನಿಟ್ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿದ್ದು ವಿಮಾನದಲ್ಲಿ ಚಿನ್ನದ ಸ್ಮಗ್ಲಿಂಗ್ ನಡೆದಿರುವ ಅನುಮಾನ ವ್ಯಕ್ತವಾಗಿದೆ ಎಂಬ ಸಂಶಯ ವ್ಯಕ್ತವಾಗಿದೆ.

ಈ ಹಿನ್ನೆಲೆ ವಿಮಾನದಿಂದ ಪ್ರಯಾಣಿಕರೆಲ್ಲಾ ನಿರ್ಗಮಿಸಿದ ಮೇಲೆ ಕಾರ್ಯಾಚರಣೆ ಆರಂಭಿಸಲಾಗಿದ್ದು ಆರೋಪಿಗಳ ಪತ್ತೆಗಾಗಿ ಅಧಿಕಾರಿಗಳು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!