Sunday, May 19, 2024
spot_imgspot_img
spot_imgspot_img

ಇಂದಿನಿಂದ ಜವಾದ್ ಚಂಡಮಾರುತದ ಅಬ್ಬರ; ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ

- Advertisement -G L Acharya panikkar
- Advertisement -
vtv vitla
vtv vitla

ಕರ್ನಾಟಕದಲ್ಲಿ ಮಳೆ ಮುಂದುವರೆಯುತ್ತಿದ್ದು, ಇಂದಿನಿಂದ ಮಳೆಯ ಜೊತೆಗೆ ನೆರೆಯ ರಾಜ್ಯವಾದ ಆಂಧ್ರ ಪ್ರದೇಶದಲ್ಲಿ ಚಂಡಮಾರುತವೂ ಅಪ್ಪಳಿಸಲಿದೆ. ಆಂಧ್ರಪ್ರದೇಶದ ಜೊತೆಗೆ ಒಡಿಶಾ, ಪಶ್ಚಿಮ ಬಂಗಾಳದಲ್ಲೂ ಇಂದು ಜವಾದ್ ಚಂಡಮಾರುತ ಆರ್ಭಟಿಸಲಿದೆ. ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಸುರಿಯುತ್ತಿದೆ. ರಾಜ್ಯಾದ್ಯಂತ ಇಂದಿನಿಂದ ಡಿ. 6ರವರೆಗೆ ವರುಣನ ಆರ್ಭಟವಿರಲಿದೆ.

vtv vitla
vtv vitla

ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದ ಅಜ್ಜಂಪುರ ತಾಲೂಕಿನ ಶಿವನಿ ಕೆರೆ ತುಂಬಿ ಹರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ 845 ಕೋಟಿ ರೂ. ಹಾನಿಯಾಗಿದೆ. ಇಂದು ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ. ಇಂದಿನಿಂದ 3 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

vtv vitla
vtv vitla

ಜವಾದ್ ಚಂಡಮಾರುತದಿಂದಾಗಿ, ಪಶ್ಚಿಮ ಬಂಗಾಳದ ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹಾಗೇ, ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಚಂಡಮಾರುತಕ್ಕೆ ಈಗಾಗಲೇ ಜವಾದ್ ಎಂದು ಹೆಸರಿಡಲಾಗಿದೆ. ಸೌದಿ ಅರೇಬಿಯಾದ ಪ್ರಕಾರ ಜವಾದ್ ಎಂದರೆ ಅರೇಬಿಕ್ ಭಾಷೆಯಲ್ಲಿ ಉದಾರ ಅಥವಾ ಕರುಣಾಮಯಿ ಎಂದರ್ಥ.

ಭಾರತದಲ್ಲಿ ಇಂದಿನಿಂದ ಜವಾದ್ ಚಂಡಮಾರುತ ಅಪ್ಪಳಿಸುವುದರಿಂದ ಉನ್ನತ ಅಧಿಕಾರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಈಗಾಗಲೇ ಒಡಿಶಾದ 14 ಜಿಲ್ಲೆಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲು ಸರ್ಕಾರ ಸೂಚಿಸಿದೆ. ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಮೊದಲು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಉತ್ತಮವಾದ ಕಡಿಮೆ ಒತ್ತಡವನ್ನು ಗಮನಿಸಲಾಗುವುದು. ಇಂದು ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲಿ ಭಾರೀ ಮಳೆಯಾಗುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇಂದು ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಜಮ್ಮು ಕಾಶ್ಮೀರ, ಲಡಾಖ್ ಭಾಗಗಳಲ್ಲಿ ಮಳೆ ಸುರಿಯಲಿದೆ. ಇಂದು ರಾತ್ರಿಯಿಂದ ನಾಳೆಯವರೆಗೆ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ಪ್ರದೇಶಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 80 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಉತ್ತರ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇಂದು ಛತ್ತೀಸ್‌ಗಢ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕ, ಕೇರಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಸ್ಥಳೀಯ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಚದುರಿದ ಮಳೆ ಹಾಗೂ ಹಿಮ ಇರಲಿದೆ. ಮಿಜೋರಾಂ ಮತ್ತು ಕೊಂಕಣ ಮತ್ತು ಗೋವಾದಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಗಾಳಿ ಬೀಸುವ ಮುನ್ಸೂಚನೆ ಇದೆ.

vtv vitla
vtv vitla
vtv vitla
- Advertisement -

Related news

error: Content is protected !!