Sunday, September 20, 2026
spot_imgspot_img
spot_imgspot_img

ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಭೇಟಿ

- Advertisement -
- Advertisement -

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ರವರು ಇಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.30 ಕ್ಕೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6.40 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

- Advertisement -

Related news

error: Content is protected !!