Sunday, May 19, 2024
spot_imgspot_img
spot_imgspot_img

ಇಂದು ಸಿಬಿಎಸ್​ಇ ಬೋರ್ಡ್​ನ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸುವ ಕುರಿತು ಸಭೆ: ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ: ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್

- Advertisement -G L Acharya panikkar
- Advertisement -

ನವದೆಹಲಿ: ಸಿಬಿಎಸ್​ಇ ಬೋರ್ಡ್​ನ 12ನೇ ತರಗತಿಯ ಪರೀಕ್ಷೆಗಳನ್ನು ನಡೆಸುವ ಕುರಿತು ಇಂದು ದೇಶದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆಗಳ ಕಾರ್ಯದರ್ಶಿಗಳು, ರಾಜ್ಯ ಪರೀಕ್ಷಾ ಮಂಡಳಿಗಳ ಅಧ್ಯಕ್ಷರುಗಳನ್ನು ಒಳಗೊಂಡ ಸಭೆ ಕರೆಯಲಾಗಿದೆ.

ಕೊವಿಡ್ ಸೋಂಕಿನಿಂದ ಈವರೆಗೆ ಆಫ್​ಲೈನ್ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದ ಕಾರಣ ಪರೀಕ್ಷೆಗಳನ್ನು ನಡೆಸುವ ಸಂಭಾವ್ಯತೆಯ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಜತೆಗೆ ಕೇಂದ್ರ ಶಿಕ್ಷಣ ಸಚಿವರು ವಿದ್ಯಾರ್ಥಿಗಳು ಮತ್ತು ಪಾಲಕರ ಬಳಿ ಸಲಹೆಯನ್ನೂ ಕೇಳಲಿದ್ದಾರೆ.

ಕೊವಿಡ್ ಕಾಲದಲ್ಲಿ ಸಿಬಿಎಸ್​ಇ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವ ಕಾರಣ, ಪಾಲಕರು ವಿದ್ಯಾರ್ಥಿಗಳು ಸಹ ತಮ್ಮ ಅಭಿಪ್ರಾಯ, ಸಲಹೆ ಸೂಚನೆಗಳನ್ನು ಟ್ವಿಟರ್​ ಮೂಲಕ ಹಂಚಿಕೊಳ್ಳುವಂತೆ ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ಮಹಿಳಾ ಮತ್ತು ಮಕ್ಕಳ ಇಲಾಖೆಗಳ ಸಚಿವೆ ಸ್ಮೃತಿ ಇರಾನಿ, ಮಾಹಿತಿ ತಂತ್ರಜ್ಞಾನ ಸಚಿವ ಪ್ರಕಾಶ್ ಜಾವಡೇಕರ್ ಭಾಗವಹಿಸಲಿದ್ದಾರೆ.

driving
- Advertisement -

Related news

error: Content is protected !!