Thursday, May 2, 2024
spot_imgspot_img
spot_imgspot_img

ಇತಿಹಾಸ ಪ್ರಸಿದ್ದ ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ರಾಜ್ಯದ ನಂ.1 ಶ್ರೀಮಂತ ದೇವಸ್ಥಾನ

- Advertisement -G L Acharya panikkar
- Advertisement -

ನಾಗಾರಾಧನೆಗೆ ಪ್ರಸಿದ್ಧಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಈ ಬಾರಿಯೂ 123 ಕೋಟಿ ರೂ. ಆದಾಯ ಗಳಿಸುವ ಮೂಲಕ ರಾಜ್ಯದಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ.

2022ರ ಏಪ್ರಿಲ್‌ನಿಂದ 2023ರ ಮಾ.31ರವರೆಗಿನ ಆರ್ಥಿಕ ವರ್ಷದಲ್ಲಿ 123,64,49,480 ರೂ. ಆದಾಯ ಗಳಿಸಿದೆ. ದೇವಾಲಯಕ್ಕೆ ಹರಕೆ ಸೇವೆ, ಕಾಣಿಕೆ ಮಾತ್ರವಲ್ಲದೇ ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಕೃಷಿ ತೋಟದಿಂದಲೂ ಆದಾಯ ಬರುತ್ತದೆ.

ಕೊರೊನಾ ಸಾಂಕ್ರಮಿಕದ ಹಿನ್ನಲೆಯಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧವಿದ್ದ ಕಾರಣ 2021-22ನೇ ಸಾಲಿನಲ್ಲಿ ಕೇವಲ 72,73,23,758 ರೂ. ಆದಾಯ ಪಡೆದಿತ್ತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2007 ರಿಂದೀಚೆಗೆ ಹೆಚ್ಚಿನ ಆದಾಯ ಪಡೆಯುವ ಮೂಲಕ ರಾಜ್ಯದ ಶ್ರೀಮಂತ ದೇವಳವಾಗಿ ಗುರುತಿಸಿಕೊಂಡಿದ್ದು, ಈ ಬಾರಿಯೂ ರಾಜ್ಯದ ನಂ.1 ಶ್ರೀಮಂತ ದೇವಸ್ಥಾನವಾಗಿ ಗುರುತಿಸಿಕೊಂಡಿದೆ.

- Advertisement -

Related news

error: Content is protected !!