Friday, June 5, 2026
spot_imgspot_img
spot_imgspot_img

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ; ಆರೋಪಿ ನೀರಜ್ ಬಂಧನ

- Advertisement -
- Advertisement -

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಬಾಲಕಿಯರಿಗೆ ಲೈಗಿಂಕ ಕಿರುಕುಳ ನೀಡುತ್ತಿದ್ದ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡೈಕಲ್‌ ನಿವಾಸಿ ನೀರಜ್‌ ಎನ್ನಲಾಗಿದೆ. ನೀರಜ್‌ನನ್ನು ಕೊಲ್ಲಂ ಕಡೈಕಲ್ ಪೊಲೀಸರು ಕಡೈಕಲ್‌ನ ನೆಲ ಅಂತಸ್ತಿನ ತೋಟದ ಮನೆಯಲ್ಲಿ ಬಂಧಿಸಿದ್ದಾರೆ.

ಚಡಯಮಂಗಲ ಮತ್ತು ಕಡೈಕಲ್ ಪ್ರದೇಶದ 7 ಮತ್ತು 8 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ. ಈತನ ವಿರುದ್ಧ ಇದೇ ರೀತಿಯ ಇತರ ಪ್ರಕರಣಗಳಿವೆ ಎಂದು ವರದಿಯಾಗಿದೆ.

ಹುಡುಗಿಯರ ನಗ್ನ ಚಿತ್ರಗಳು ಮತ್ತು ವಿಡಿಯೋಗಳನ್ನು ಕುತಂತ್ರದಿಂದ ಸೆರೆಹಿಡಿದಿದ್ದಾನೆ. ಆ ಬಳಿಕ ವೀಡಿಯೋ ತೋರಿಸಿ ಬೆದರಿಸುತ್ತಿದ್ದ. ರಾತ್ರಿ ವೇಳೆ ಮನೆಯಿಂದ ಹೊರಗೆ ಏಕಾಂತ ಸ್ಥಳಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ವಿಚಾರಣೆ ವೇಳೆ ಇತರ ಹುಡುಗಿಯರಿಗೂ ಚಿತ್ರಹಿಂಸೆ ನೀಡಲಾಗಿತ್ತು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯಿಂದ ಸಾಕ್ಷ್ಯಾಧಾರಗಳನ್ನು ತೆಗೆದುಕೊಂಡ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

vtv vitla
- Advertisement -

Related news

error: Content is protected !!