- Advertisement -
- Advertisement -


ದೊಡ್ಡಬಳ್ಳಾಪುರ: ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರು ಸಂಧ್ಯಾ(33) ಹಾಗೂ ಇಬ್ಬರು ಪುಟ್ಟ ಮಕ್ಕಳು ಎನ್ನಲಾಗಿದೆ.

ಸಂಧ್ಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊನೆಗೆ ತಾನೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ವೇಳೆ ಸಂಧ್ಯಾ ತನ್ನ ಮಕ್ಕಳನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ಕಂಡ ಅಕ್ಕ-ಪಕ್ಕದ ಮನೆಯವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


- Advertisement -








