Wednesday, June 17, 2026
spot_imgspot_img
spot_imgspot_img

ಇಬ್ಬರು ಮಕ್ಕಳೊಂದಿಗೆ ತಾಯಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ

- Advertisement -
- Advertisement -

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ತಾಯಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಪರಸಪ್ಪ ಗೋಡಿ (32) ಹಾಗೂ ಮಕ್ಕಳಾದ ಸುದೀಪ್ (4) ಮತ್ತು ರಾಧಿಕಾ (3) ಮೃತ ದುರ್ದೈವಿಗಳು. ಸೌದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ವಟ್ನಾಳ ಗ್ರಾಮ ನವಿಲುತೀರ್ಥ ಜಲಾಶಯದ ಹಿನ್ನೀರಿಗೆ ಮಕ್ಕಳೊಂದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಸಾರದಲ್ಲಿನ ಸಮಸ್ಯೆಯಿಂದಾಗಿ ಜಿಗುಪ್ಸೆಗೊಂಡು ಮಹಿಳೆ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೌದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದ್ದು, ತನಿಖೆ ಮುಂದುವರಿದಿದೆ.

vtv vitla

- Advertisement -

Related news

error: Content is protected !!