Friday, May 17, 2024
spot_imgspot_img
spot_imgspot_img

ಉಕ್ರೇನ್’ನಿಂದ ಬಂದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವ್ಯಾಸಂಗಕ್ಕೆ ವ್ಯವಸ್ಥೆ- ಸಚಿವರ ಭರವಸೆ

- Advertisement -G L Acharya panikkar
- Advertisement -

ಬೆಂಗಳೂರು: ಉಕ್ರೇನ್ ಯುದ್ಧ ಪೀಡಿದ ಭೂಮಿಯಿಂದ ರಾಜ್ಯಕ್ಕೆ ವಾಪಾಸ್ ಆದಂತ ಎಂ ಬಿ ಬಿ ಎಸ್ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಮುಂದುವರಿಕೆ ಆತಂಕ ಎದುರಿಸುತ್ತಿದ್ದು, ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯದಲ್ಲೇ ಶಿಕ್ಷಣಕ್ಕೆ ವ್ಯವಸ್ಥೆ ಮಾಡುವುದಾಗಿ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದಂತ ವಿದ್ಯಾರ್ಥಿಗಳು ಶಿಕ್ಷಣ ಮುಂದುವರೆಸುವ ಅತಂತ್ರದಲ್ಲಿದ್ದಾರೆ. ಹೀಗಾಗಿ ಅವರ ವ್ಯಾಸಂಗ ಮುಂದುವರಿಸುವ ಬಗ್ಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಗೆ ನವೀನ್ ಸಾವನ್ನಪ್ಪಿರುವ ಬಗ್ಗೆ ಖೇದ ವ್ಯಕ್ತಪಡಿಸಿರುವ ಅವರು, ಯುದ್ಧಭೂಮಿಯಲ್ಲಿ ಸಿಲುಕಿದ್ದಂತ 22 ಸಾವಿರ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ ಎಂದು ಹೇಳಿ, ಈ ಕಾರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದರು.

- Advertisement -

Related news

error: Content is protected !!