Wednesday, April 24, 2024
spot_imgspot_img
spot_imgspot_img

ಉಕ್ರೇನ್ ನಲ್ಲಿ ಮೃತನಾದ ನವೀನ್ ದೇಹದಾನಕ್ಕೆ ಕುಟುಂಬಸ್ಥರ ನಿರ್ಧಾರ

- Advertisement -G L Acharya panikkar
- Advertisement -

ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ದಾವಣಗೆರೆಯ ಎಸ್‌.ಎಸ್‌.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಈ ಕುರಿತು ಮಾತನಾಡಿದ ನವೀನ ಗ್ಯಾನಗೌಡರ ತಂದೆ ಶೇಖರಪ್ಪ, ” ಪಾರ್ಥಿವ ಶರೀರ ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ತಲುಪಿ, 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ. ನಂತರ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಿ ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು”.

“ನನ್ನ ಪುತ್ರ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಆಸೆ ಹೊಂದಿದ್ದ. ಆದರೆ ದುರಾದೃಷ್ಟವಶಾತ್ ಈ ಆಸೆ ಈಡೇರಲಿಲ್ಲ. ಬೇರೆ ವೈದ್ಯಕೀಯ ವಿದ್ಯಾರ್ಥಿಗಳ ಮುಖಾಂತರವಾದರೂ ಅವನ ಮೃತದೇಹ ವೈದ್ಯಕೀಯ ಕ್ಷೇತ್ರಕ್ಕೆ ಬಳಕೆಯಾಗಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದ್ದೇವೆ” ಎಂದು ನೊಂದು ನುಡಿದರು.

- Advertisement -

Related news

error: Content is protected !!