Saturday, May 18, 2024
spot_imgspot_img
spot_imgspot_img

ಉಕ್ರೇನ್ ನಲ್ಲಿ ಶಾಂತಿ ಸ್ಥಾಪನೆಗೆ ಭಾರತದಿಂದ ಸರ್ವ ಸಹಕಾರ’; ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ಉಕ್ರೇನ್ ನಲ್ಲಿ ಶಾಂತಿ ಸ್ಥಾಪನೆ ಸಂಬಂಧ ಭಾರತ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದ ಎಂದು ರಷ್ಯಾ ವಿದೇಶಾಂಗ ಸಚಿವ ಸರ್ಗೈ ಲಾವ್ರೊವ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಅವರು, ಪ್ರಧಾನಿ ಮೋದಿ ಅವರೊಂದಿಗೆ ಮಾತುಕತೆ ನಡೆಸಿದರು. ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈ ಶಂಕರ್‍ ಅವರೊಂದಿಗೂ ಮಹತ್ವದ ಮಾತುಕತೆ ನಡೆಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಷ್ಯಾ ವಿದೇಶಾಂಗ ಸಚಿವರು, ಅಂತಾರಾಷ್ಟ್ರೀಯ ಸಮಸ್ಯೆಗಳ ವಿಚಾರದಲ್ಲಿ ಭಾರತ ನ್ಯಾಯಯುತವಾದ ನಿಲುವು ಹೊಂದಿದೆ. ಅವಶ್ಯಕತೆ ಇದ್ದಲ್ಲಿ ಇಂತಹ ವಿಚಾರಗಳಲ್ಲಿ ಭಾರತ ತನ್ನ ನಿಲುವು ವ್ಯಕ್ತಪಡಿಸಲಿದೆ ಮತ್ತು ಅಗತ್ಯ ಸಹಕಾರ ನೀಡಲಿದೆ ಎಂದರು. ರಷ್ಯಾ ಅಧ್ಯಕ್ಷ ವ್ಲಾದಿಮಿರ್‍ ಪುತಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ವೈಯಕ್ತಿಕ ಸಂದೇಶ ತಲುಪಿಲು ಬಯಸಿರುವ ಹಿನ್ನೆಲೆಯಲ್ಲಿ ತಾನು ಭಾರತಕ್ಕೆ ಬಂದಿರುವುದಾಗಿ ಅವರು ಇದೇ ವೇಳೆ ಹೇಳಿದ್ದಾರೆ.

ರಷ್ಯಾ ಯುದ್ದ ನಿಲ್ಲಿಸಲು ಭಾರತ ಮಾತುಕತೆ ನಡೆಸಬೇಕೆಂಬ ನಿಟ್ಟಿನಲ್ಲಿ ಭಾರತಕ್ಕೆ ಅಂತಾರಾಷ್ಟ್ರೀಯ ಒತ್ತಡ ಬರುತ್ತಿರುವುದರ ನಡುವೆ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಉಕ್ರೇನ್ ವಿರುದ್ದ ಹಿಂಸಾಚಾರವನ್ನು ರಷ್ಯಾ ನಿಲ್ಲಿಸಬೇಕು ಎಂಬುದಾಗಿ ಈ ವೇಳೆ ಮೋದಿ ರಷ್ಯಾ ಸಚಿವರನ್ನುಒತ್ತಾಯಿಸಿದ್ದಾರೆ.

- Advertisement -

Related news

error: Content is protected !!