Friday, April 19, 2024
spot_imgspot_img
spot_imgspot_img

ಉಗ್ರ ಸಂಘಟನೆಯೊಂದಿಗೆ ಸಂಪರ್ಕ; ಮಂಗಳೂರಿನಲ್ಲಿ ಓರ್ವ ಶಂಕಿತ ಉಗ್ರನ ಬಂಧನ…!!

- Advertisement -G L Acharya panikkar
- Advertisement -

ಮಂಗಳೂರು: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಅನ್ಸರ್ ಎಂಬ ಶಂಕಿತ ಉಗ್ರನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಅಜ್ಞಾತ ಸ್ಥಳದಲ್ಲಿಟ್ಟುಕೊಂಡು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಶಿವಮೊಗ್ಗದಲ್ಲಿ ಶಂಕಿತ ಉಗ್ರ ಯಾಸಿನ್ ಹಾಗೂ ಮಾಜ್ ಎನ್ನುವವನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ‘ ಶಂಕಿತ ಉಗ್ರರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಿದ್ದೇವೆ, ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ, ಒಟ್ಟು ಮೂವರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ಶಿವಮೊಗ್ಗ ದಲ್ಲಿ ಕೂತು ರಾಜ್ಯದ ಹಲವೆಡೆ ಬಾಂಬ್ ಬ್ಲಾಸ್ಟ್ ಹಾಗೂ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು, ಐಸಿಸ್ ಉಗ್ರರ ಜತೆಗೆ ಮಂಗಳೂರು-ಶಿವಮೊಗ್ಗ ಲಿಂಕ್ ಕೂಡ ಹೊಂದಿದ ಒಟ್ಟು ಮೂವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ರಾಜ್ಯದ ಹಲವು ಕಡೆ ಬಾಂಬ್ ಬ್ಲಾಸ್ಟ್ ಮಾಡೋದಕ್ಕೆ ಪ್ಲಾನ್ ಮಾಡ್ತಿದ್ದರು. ಮೂವರು ಶಂಕಿತ ಎ1 ಆರೋಪಿ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಶಾರಿಖ್, ಎ-2 ಮಂಗಳೂರು ಮೂಲದ ಮಾಸ್, ಎಲೆಕ್ನಿಕ್ ಇಂಜಿನಿಯರ್ ಆಗಿದ್ದ, ಜತೆಗೆ ಶಿವಮೊಗ್ಗ ಸಿದ್ದೇಶ್ವರ ನಗರದ ಎ-3 ಆರೋಪಿ ಯಾಸಿನ್ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಭಾಗದಲ್ಲಿ ಶಂಕಿತ ಉಗ್ರರಿದ್ದಾರೆಂಬುದೇ ಆತಂಕಕಾರಿ: ಗೃಹ ಸಚಿವ ಅರಗ ಜ್ಞಾನೇಂದ್ರ

ನಗರದಲ್ಲಿ ಶಂಕಿತ ಉಗ್ರ ಯಾಸಿನ್ & ಮಾಜ್ ಎಂಬಾತನನ್ನು ಅರೆಸ್ಟ್ ಮಾಡಿದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಶಿವಮೊಗ್ಗ ಭಾಗದಲ್ಲಿ ಇಂತಥವರಿದ್ದಾರೆಂಬುದೇ ಆತಂಕಕಾರಿ ಸಂಗತಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಒಬ್ಬ ತೀರ್ಥಹಳ್ಳಿ ವಾಸಿ, ಮತ್ತೊಬ್ಬ ಕರಾವಳಿಯವನು. ಶಿವಮೊಗ್ಗ ಭಾಗದಲ್ಲಿ ಇಂತಥವರಿದ್ದಾರೆಂಬುದೇ ಆತಂಕಕಾರಿ ಸಂಗತಿಯಾಗಿದೆ. ತನಿಖೆಯಿಂದ ಮತ್ತಷ್ಟು ವಿಚಾರಗಳು ಹೊರಬರಬೇಕಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

- Advertisement -

Related news

error: Content is protected !!