Monday, June 30, 2025
spot_imgspot_img
spot_imgspot_img

ಉಜಿರೆ: ಲಾಡ್ಜ್‌ಗಳ ಮೇಲೆ ಖಾಕಿ ರೈಡ್..! ಅನೈತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು..??

- Advertisement -
- Advertisement -
vtv vitla

ಬೆಳ್ತಂಗಡಿ: ಉಜಿರೆಯ ಎಂ.ಎಸ್.ಎಸ್ ಲಾಡ್ಜ್ ವೊಂದಕ್ಕೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿಯಂತೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 5 ಮಂದಿ ಮಹಿಳೆಯರು ಸೇರಿದಂತೆ ಇಬ್ಬರು ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಈ ಲಾಡ್ಜ್ ಅನ್ನು ಸುರೇಶ್ ಎಂಬುವವರು ಬಾಡಿಗೆ ಪಡೆದಿದ್ದರು.

ನಿನ್ನೆಯಷ್ಟೆ (ಫೆ.6)ಬಂಟ್ವಾಳ ಡಿವೈಎಸ್ ಪಿ ನೇತೃತ್ವದ ತಂಡದಿಂದ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದ್ದಲ್ಲದೆ ಇವತ್ತು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲಕರ ಸಭೆ ನಡೆಸಿ ಯಾವುದೇ ಕಾರಣಕ್ಕೂ ಅನೈತಿಕ ವ್ಯವಹಾರ ಎಚ್ಚರಿಕೆಯನ್ನು ನೀಡಿದ್ದರು.

ಆದರೆ ಈ ಬೆನ್ನಲ್ಲೇ ಉಜಿರೆಯ ಎಂ ಎಸ್ ಎಸ್ ಲಾಡ್ಜ್ ನಲ್ಲಿ ಅಕ್ರಮ ವೇಶ್ಯವಾಟಿಕೆ ನಡೆಯುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಪೊಲೀಸರು ಲಾಡ್ಜ್ ಗೆ ದಾಳಿ ನಡೆಸಿ 5ಮಹಿಳೆಯರ ಸಹಿತ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!