Friday, May 17, 2024
spot_imgspot_img
spot_imgspot_img

ಉಡುಪಿ:ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ; ಐವರು ವಿದ್ಯಾರ್ಥಿಗಳು ಪೊಲೀಸ್‌ ವಶಕ್ಕೆ

- Advertisement -G L Acharya panikkar
- Advertisement -

ಉಡುಪಿ:ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.

ನಿಖಿಲ್ ಎಂ. (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ. (21) ವಶಕ್ಕೆ ಪಡೆದುಕೊಂಡಿರುವ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ವಿದ್ಯಾರ್ಥಿಗಳು ಗಾಂಜಾವನ್ನು ಸೇವಿಸಿರುವ ಸಂಶಯದ ಮೇಲೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಲಾಗಿದ್ದು, ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ಧೃಡಪಟ್ಟಿದೆ. ಮಣಿಪಾಲ ಪೊಲೀಸ್ ಠಾಣೆ ಎನ್‌‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!