Friday, April 26, 2024
spot_imgspot_img
spot_imgspot_img

ಉಡುಪಿ: ಅಕ್ರಮ ಕಸಾಯಿಖಾನೆಗೆ ದಾಳಿ; ಮಹಿಳೆಯರು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ – ಕರ್ತವ್ಯಕ್ಕೆ ಅಡ್ಡಿ.!

- Advertisement -G L Acharya panikkar
- Advertisement -
vtv vitla

vtv vitla

ಉಡುಪಿ: ಉಡುಪಿ ಜಿಲ್ಲೆಯ ಕಾಪುವಿನ ಮೂಳೂರು ಗ್ರಾಮದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿದ ವೇಳೆ, ಮಹಿಳೆಯರಿಂದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನಡೆದಿದೆ.

ಮೂಳೂರು ಗ್ರಾಮದ ಸುನ್ನಿ ಸೆಂಟರ್ ಹಿಂಬದಿಯಲ್ಲಿರುವ ಅಬ್ಬು ಮಹಮ್ಮದ್ ಎಂಬುವವರ ಮನೆಯ ಹಿಂದಿನ ಕೊಟ್ಟಿಗೆಯಲ್ಲಿ ‌ದನವನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ಸಿ ಅವರು ಇಂದು ಇತರ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತಲುಪಿ ಮರೆಯಲ್ಲಿ ನಿಂತು ನೋಡಿದಾಗ ಕೊಟ್ಟಿಗೆಯ ಸಮೀಪ ಒಂದು ಕರುವನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಿದ್ದು ಅಲ್ಲದೇ, ಅಲ್ಲೇ ಕೊಟ್ಟಿಗೆಯಲ್ಲಿ ಮಾಂಸವನ್ನು ತಯಾರಿ ಮಾಡುತ್ತಿದ್ದುದು ಕಂಡು ಬಂದಿದೆ. ಈ ಬಗ್ಗೆ ಮಾಹಿತಿ ಖಚಿತ ಪಡಿಸಿಕೊಂಡು ಸಿಬ್ಬಂದಿಯವರೊಂದಿಗೆ ಪೊಲೀಸರು ದಾಳಿ ನಡೆಸಿದಾಗ ಮಾಂಸ ಮಾಡುತ್ತಿದ್ದ ಇಸ್ಮಾಯಿಲ್ ಮತ್ತು ಅಬ್ಬು ಮಹಮ್ಮದ್ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ಈ ವೇಳೆ ಸ್ಥಳದಲ್ಲಿ ಇದ್ದ 1 ಕರು, 2000 ರೂ ಮೌಲ್ಯದ 10 ಕೆಜಿ ಮಾಂಸ ಹಾಗೂ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಮಹಿಳೆಯರಾದ ಐಸಮ್ಮ, ರೆಯಾನ, ಜೋಹ್ರಾ ಮತ್ತು ಇತರರು ಏಕಾಏಕಿ ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದಾರೆ. ಅಲ್ಲದೆ ಆರೋಪಿಗಳು ದನದ ಕರುಗಳನ್ನು ಅಕ್ರಮವಾಗಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಕಳ್ಳತನ ಮಾಡಿ ತಂದಿರುವುದಾಗಿ ತಿಳಿದು ಬಂದಿದೆ ಎಂಬುದಾಗಿ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla

- Advertisement -

Related news

error: Content is protected !!