Friday, May 3, 2024
spot_imgspot_img
spot_imgspot_img

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ವೃದ್ದನ ಬಂಧನ

- Advertisement -G L Acharya panikkar
- Advertisement -

ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೃದ್ದ 65 ವರ್ಷ ಪ್ರಾಯದ ಅನಂತ ಸೇರೆಗಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಮಕ್ಕಳ ಸಹಾಯವಾಣಿಗೆ 11 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳವಾದ ಬಗ್ಗೆ ಮಾಹಿತಿ ಬಂದಿದ್ದು, ಈ ಬಗ್ಗೆ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು ತಕ್ಷಣ ಅಪ್ರಾಪ್ತ ಬಾಲಕಿಯ ಮನೆಗೆ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಮಾಜ ಕಾರ್ಯಕರ್ತರಾದ ಯೋಗೀಶ್ ಮತ್ತು ಸುರಕ್ಷಾ ಭೇಟಿ ನೀಡಿ ಅಪ್ರಾಪ್ತ ಬಾಲಕಿಯನ್ನು ಸಮಾಲೋಚನೆಗೆ ಒಳಪಡಿಸಲಾಯಿತು.

ಈ ಘಟನೆಯ ಬಗ್ಗೆ ಉಡುಪಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೋಷಕರಿಗೆ ತಿಳಿಸಲಾಯಿತು . ಪೋಷಕರ ದೂರಿನಂತೆ ಮಹಿಳಾ ಠಾಣೆಯಲ್ಲಿ ವೃತ್ತ ನಿರೀಕ್ಷಕರಾದ ಜಯಂತ್ ಎಮ್ ರವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕರಾದ ವೈಲೆಟ್ ಫೆಮಿನಾ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂದಿಸಿದ್ದಾರೆ. ಮಹಿಳಾ ಠಾಣಾ ಸಿಬ್ಬಂದಿಗಳಾದ ಅಶೋಕ್ ಮತ್ತು ಜ್ಯೋತಿ ನಾಯಕ್ ಮತ್ತಿತರರು ಭಾಗವಹಿಸಿದ್ದರು.

- Advertisement -

Related news

error: Content is protected !!