Friday, April 26, 2024
spot_imgspot_img
spot_imgspot_img

ಉಡುಪಿ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿ ತಂದೆಗೆ ಜೀವಾವಧಿ ಶಿಕ್ಷೆ

- Advertisement -G L Acharya panikkar
- Advertisement -

ಉಡುಪಿ: ತನ್ನ ಅಪ್ರಾಪ್ತ ಮಗಳ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದ ತಂದೆಯ ಮೇಲಿದ್ದ ದೋಷಾರೋಪಣೆಗಳು ಸಾಬೀತಾಗಿದ್ದು ಅಪರಾಧಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೊಕ್ಸೊ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ.

vtv vitla

ಈ ಘಟನೆ ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರ ಮೇ ತಿಂಗಳಿನಲ್ಲಿ ನಡೆದಿತ್ತು. ಮನೆಯಲ್ಲಿ ತಾಯಿ ಹಾಗೂ ಕಿರಿಯ ಸೋದರ ಇಲ್ಲದ ಸಂದರ್ಭ 41 ವರ್ಷದ ತಂದೆ 14 ವರ್ಷ ಪ್ರಾಯದ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದ. ಎರಡನೇ ಬಾರಿಯೂ ಮನೆಯಲ್ಲಿ ಯಾರಿಲ್ಲದ ವೇಳೆ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು ಯಾರಿಗಾದರೂ ಹೇಳಿದಲ್ಲಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದ.

ನೊಂದ ಬಾಲಕಿ ಪಕ್ಕದ ಮನೆಯವರ ಬೆಂಬಲದೊಂದಿಗೆ ತನ್ನ ತಾಯಿಗೆ ಕರೆ ಮಾಡಿ ತಾನು ಅನುಭವಿಸಿದ ನೋವನ್ನು ತಾಯಿಗೆ ತಿಳಿಸಿದ್ದಾಳೆ. ಮನೆಗೆ ಬಂದ ಆಕೆ ಕೂಲಂಕುಷವಾಗಿ ವಿಚಾರಿಸಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ. ಬಳಿಕ ತಾಯಿ ಈ ಬಗ್ಗೆ ಉಡುಪಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಆರೋಪಿ ತಂದೆಯನ್ನು ಬಂಧಿಸಲಾಗಿತ್ತು.

vtv vitla
vtv vitla

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಮಹಿಳಾ ಠಾಣೆಯ ಅಂದಿನ ಸಿಪಿಐ ಸಿ.ಕಿರಣ್ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಒಟ್ಟು 23 ಸಾಕ್ಷಿಗಳ ಪೈಕಿ ನ್ಯಾಯಾಲಯದಲ್ಲಿ 11 ಮಂದಿಯ ವಿಚಾರಣೆ ನಡೆಸಲಾಗಿತ್ತು. ಸಂತ್ರಸ್ತ ಬಾಲಕಿ, ಬಾಲಕಿಯ ತಾಯಿ ಹಾಗೂ ನೆರೆಮನೆಯಾಕೆ ನುಡಿದ ಸಾಕ್ಷಿಗಳು ಅಭಿಯೋಜನೆಗೆ ಪೂರಕವಾಗಿತ್ತು.

ಇವೆಲ್ಲವುಗಳ ಆಧಾರದಲ್ಲಿ ಬಾಲಕಿಯ ತಂದೆ ಅಪರಾಧಿ ಎಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಅಪರಾಧಿಗೆ ಜೀವಿತಾವಧಿ (ಕೊನೆಯ ಉಸಿರು ಇರುವ ತನಕ) ಜೈಲು ಶಿಕ್ಷೆ, 20 ಸಾವಿರ ರೂ.ದಂಡ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ 5 ಸಾವಿರ ರೂ.ದಂಡ ವಿಧಿಸಿದ್ದು, ಸಂತ್ರಸ್ತ ಬಾಲಕಿಗೆ ಸರಕಾರ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ಆದೇಶಿಸಲಾಗಿದೆ.ಉಡುಪಿಯ ಪೊಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು

vtv vitla
vtv vitla
- Advertisement -

Related news

error: Content is protected !!