Friday, May 17, 2024
spot_imgspot_img
spot_imgspot_img

ಉಡುಪಿ: ಇಸ್ಲಾಂ ಮತ್ತು ಪ್ರವಾದಿ ಬಗ್ಗೆ ಅವಹೇಳನಕಾರಿ ಬರಹ; ಪ್ರೊ.ರಾಮಚಂದ್ರಯ್ಯ ವಿರುದ್ದ ಕ್ಯಾಂಪಸ್ ಫ್ರಂಟ್ ವತಿಯಿಂದ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು

- Advertisement -G L Acharya panikkar
- Advertisement -

ಉಡುಪಿ: ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ವಯಗೊಂಡ ಬಿಎಡ್ ಮೂರನೇ ಸೆಮಿಸ್ಟರ್ ಮೌಲ್ಯಾಧಾರಿತ ಶಿಕ್ಷಣದ ಹೆಸರಿನಲ್ಲಿರುವ ಪಠ್ಯಪುಸ್ತಕದಲ್ಲಿ ಇಸ್ಲಾಂ ಧರ್ಮ ಮತ್ತು ಮುಸ್ಲಿಂಮರ , ಪ್ರವಾದಿ ಮುಹಮ್ಮದ್ (ಸ) ರವರ ಕುರಿತು ಪೂರ್ವಗ್ರಹ ಪೀಡಿತ, ಅವಹೇಳನಕಾರಿ ಅಂಶಗಳಿದ್ದು, ಲೇಖಕ ಬಿಆರ್ ರಾಮಚಂದ್ರಯ್ಯರವರ ವಿರುದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ತುಮಕೂರಿನ ಕಾಲೇಜೊಂದರ ಸಹಾಯಕ ಪ್ರಾಧ್ಯಾಪಕ ಬಿ.ಆರ್ ರಾಮಚಂದ್ರಯ್ಯ ಎಂಬವರು ಬರೆದಿರುವ ಮೈಸೂರಿನ ವಿಸ್ಮಯ ಪ್ರಕಾಶನ ಪ್ರಕಟಿಸಿರುವ “ಮೌಲ್ಯ ದರ್ಶನ ದಿ ಎಸ್ಸೆನ್ಸ್ ಆಫ್ ವ್ಯಾಲ್ಯೂ ಎಜುಕೇಶನ್” ಎಂಬ ಆಂಗ್ಲ ಕೃತಿಯಲ್ಲಿ ಇಸ್ಲಾಂ, ಮುಸ್ಲಿಂಮರನ್ನು ಮತ್ತು ಪ್ರವಾದಿ ಮುಹಮ್ಮದ್ (ಸ) ರವರನ್ನು ಅವಹೇಳನ ಮಾಡಲಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ನಿಯೋಗವು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಈ ಪಠ್ಯ ಪುಸ್ತಕವನ್ನು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಬಿ.ಎಡ್ ಮೂರನೇ ಸೆಮಿಸ್ಟರ್ ನ ಪಠ್ಯವಾಗಿ ಆಯ್ಕೆ ಮಾಡಿಕೊಂಡಿರುವುದನ್ನು ಶೀಘ್ರ ಹಿಂಪಡೆಯಬೇಕು ಹಾಗು ಉದ್ದೇಶಪೂರ್ವಕವಾಗಿ ಕೋಮುಭಾವನೆಯನ್ನು ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಲೇಖಕ ಬಿ ಆರ್ ರಾಮಚಂದ್ರಯ್ಯ ಮತ್ತು ಪುಸ್ತಕ ಪ್ರಕಟಿಸಿದ ವಿಸ್ಮಯ ಪ್ರಕಾಶನ ಪಬ್ಲಿಕೇಶನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್ ಆದಿ ಉಡುಪಿ, ಕಾರ್ಯಕರ್ತರಾದ ತಾಬಿಷ್ ಉದ್ಯಾವರ ಹಾಗೂ ಅಬ್ಸರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!