Saturday, May 4, 2024
spot_imgspot_img
spot_imgspot_img

ಉಡುಪಿ: ಕಾರು-ಬೈಕ್‌ ನಡುವೆ ಅಪಘಾತ; ಯುವಕ ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -
vtv vitla

ಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಬಳಿ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ನಿವಾಸಿ ಸ್ಟ್ಯಾಲಿನ್ ( 18) ಮೃತ ಯುವಕನಾಗಿದ್ದಾನೆ.

ಸ್ಟ್ಯಾಲಿನ್‌ ಹಿರಿಯಡ್ಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಸ್ಕೋಡಾ ಕಾರೊಂದು ಇವರ ಬೈಕ್ ಗೆ ಢಿಕ್ಕಿಯಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಸ್ಟ್ಯಾಲಿನ್ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದೇ ಸಂದರ್ಭದಲ್ಲಿ ಸ್ಟ್ಯಾಲಿನ್ ನ ಹಿಂದಿನಿಂದ ಬರುತ್ತಿದ್ದ ಇಕೋ ಸ್ಪೋರ್ಟ್ಸ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು, ರಸ್ತೆಯ ಬದಿಯ ಪೊದೆಗೆ ನುಗ್ಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರೆ.

- Advertisement -

Related news

error: Content is protected !!