Thursday, May 2, 2024
spot_imgspot_img
spot_imgspot_img

ಉಡುಪಿ: ಕುಖ್ಯಾತ ಅಂತರ್ ರಾಜ್ಯ ಮನೆ ಕಳ್ಳರ ಬಂಧನ

- Advertisement -G L Acharya panikkar
- Advertisement -

ಉಡುಪಿ: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರಾಜ್ಯ ಕಳ್ಳರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ, ತಮಿಳುನಾಡಿನ ಕೊಯಿಮುತ್ತೂರು ಮೂಲದ ರಾಜನ್, ಷಣ್ಮುಗಂ ಎನ್ನಲಾಗಿದೆ.


ಆರೋಪಿಗಳ ಪೈಕಿ ದಿಲೀಪ್ ಶೆಟ್ಟಿ ಹಾಗೂ ರಾಜನ್ ಇವರನ್ನು ವಿಚಾರಿಸಿದಾಗ ಬ್ರಹ್ಮಾವರ ಠಾಣಾ ಸರಹದ್ದಿನಲ್ಲಿ 2 ಮನೆ ಕಳ್ಳತನ, ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ-1 ಮನೆ ಕಳ್ಳತನ ಹಾಗೂ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ 2 ಮನೆ ಕಳ್ಳತನ ನಡೆಸಿದ್ದು, ಸ್ವತ್ತು, ಚಿನ್ನಾಭರಣ ಕಳವು ಮಾಡಿರುವುದಾಗಿ ತಪ್ಪೋಪ್ಪಿಕೊಂಡಿದ್ದಾರೆ. ಹಾಗೂ ಬಂಧಿತ ಆರೋಪಿಗಳಿಂದ ಸುಮಾರು 13 ಲಕ್ಷ ರೂ.ಮೌಲ್ಯದ ಚಿನ್ನಾಭರಣ 20,000 ರೂ. ಮೌಲ್ಯದ 500 ಗ್ರಾಂ ಬೆಳ್ಳಿ ಆಭರಣಗಳು. ಕೃತ್ಯಕ್ಕೆ ಬಳಸಿದ 2 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಜು.29 ರಂದು ಬ್ರಹ್ಮಾವರ ಠಾಣಾ ಸರಹದ್ದಿನ ಹಾವಂಜೆ ಗ್ರಾಮದ ಶೇಡಿಗುಳಿ ಎಂಬಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಸ್ಯಾಂಟ್ರೋ ಕಾರನ್ನು ನಿಲ್ಲಿಸಿ ಪರಿಶೀಲಿಸಿದಾಗ ಕಾರಿನಲ್ಲಿ ಮನೆಯ ಬಾಗಿಲು ಒಡೆಯುವ ಕಬ್ಬಿಣದ ರಾಡ್, ಬೆಳ್ಳಿಯ ಆಭರಣಗಳು ಪತ್ತೆಯಾಗಿದ್ದು, ಮೂವರನ್ನು ಬಂಧಿಸಿ 5 ಮನೆ ಕಳ್ಳತನ ಪ್ರಕರಣಗಳನ್ನು ಭೇಧಿಸಿದ್ದಾರೆ.

- Advertisement -

Related news

error: Content is protected !!