Friday, March 29, 2024
spot_imgspot_img
spot_imgspot_img

ಉಡುಪಿ: ಕೋವಿಡ್‌ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ನೂತನ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ

- Advertisement -G L Acharya panikkar
- Advertisement -
vtv vitla

ಉಡುಪಿ: ಕೋವಿಡ್ ರೂಪಾಂತರಿಯ ಹರಡುವಿಕೆಯನ್ನು ತಡೆಗಟ್ಟಲು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಮುಂಜಾಗೃತ ಕ್ರಮವಾಗಿ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ‌.

ಹೊಸ ವರ್ಷಕ್ಕೆ ಸಂಬಂಧಿಸಿದಂತೆ ದಿನಾಂಕ: 31-12-2022, 01-01-2023 ಮತ್ತು 02.01.2023 ರಂದು ಆಚರಿಸಲಾಗುವ ಎಲ್ಲಾ ಸಮಾರಂಭಗಳನ್ನು ಮಧ್ಯರಾತ್ರಿ 1.00 ಗಂಟೆಯ ಒಳಗಾಗಿ ಕಡ್ಡಾಯವಾಗಿ ಮುಕ್ತಾಯಗೊಳಿಸಬೇಕು.

ದೊಡ್ಡ ಪ್ರಮಾಣದಲ್ಲಿ ನಡೆಸುವ ಸಮಾರಂಭಗಳನ್ನು ಕಡ್ಡಾಯವಾಗಿ ಹೊರಾಂಗಣದಲ್ಲಿ ಬೆಳಗಿನ ಹೊತ್ತಿನಲ್ಲಿ ನಡೆಸತಕ್ಕದ್ದು. ಸಾಧ್ಯವಾದಷ್ಟು ಮುಂಜಾನೆ ಹಾಗೂ ತಡರಾತ್ರಿಯ ಸಮಯದಲ್ಲಿ ಆಚರಣೆ ಮಾಡುವುದನ್ನು ತಪ್ಪಿಸಬೇಕು. ಸಾರ್ವಜನಿಕರು ಸೇರುವ ಪ್ರದೇಶ, ಸ್ಥಳಗಳಲ್ಲಿ ಆಸನ ಸಾಮರ್ಥ್ಯ ಮೀರದಂತೆ ಮುಖ್ಯವಾಗಿ ಒಳಾಂಗಣ ಪ್ರದೇಶ ಸ್ಥಳಗಳಾದ ಹೋಟೆಲ್‌, ಬಾರ್ ಅಂಡ್ ರೆಸ್ಟೋರೆಂಟ್ಸ್, ರೆಸಾಟ್ಸ್, ಪಬ್ ಕ್ಲಬ್ ಇತ್ಯಾದಿಗಳಲ್ಲಿನ ಆಸನ ಸಾಮರ್ಥ್ಯ ಮೀರದಂತೆ ಸಂಬಂಧಪಟ್ಟ ಮಾಲೀಕರು, ವ್ಯವಸ್ಥಾಪಕರುಗಳು ಕ್ರಮಕೈಗೊಳ್ಳಬೇಕು.

ಎಲ್ಲಾ ಸಾರ್ವಜನಿಕ ಸ್ಥಳಗಳು, ಸರ್ಕಾರಿ ಕಛೇರಿಗಳು, ಬಸ್ ನಿಲ್ದಾಣಗಳು, ಪ್ರಾರ್ಥನಾ ಮಂದಿರ/ಪೂಜಾ ಮಂದಿರ/ದೇವಸ್ಥಾನಗಳು, ಅಂಗಡಿ ಮುಂಗಟ್ಟುಗಳು, ಕೈಗಾರಿಕೆ ಹಾಗೂ ಇತರೆ ಕಾರ್ಖಾನೆಗಳು ಇತ್ಯಾದಿ ಪ್ರದೇಶ ಗಳಲ್ಲಿ ಮುಖಗವಸವನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯವಾಗಿರುತ್ತದೆ. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಹಾಗೂ ಇತ್ಯಾದಿ ಕೋವಿಡ್-19 ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ಪ್ರೇರಿತರಾಗಿ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು

60 ವರ್ಷ ಮೇಲ್ಪಟ್ಟ ವಯಸ್ಕರರು, ಅನಾರೋಗ್ಯದಿಂದ ಬಳಲುತ್ತಿರುವವರು, ಗರ್ಭಿಣಿಯರು ಮತ್ತು ಬಾಣಂತಿಯರು ಇಂತಹ ಸಭೆ-ಸಮಾರಂಭಗಳಲ್ಲಿ ಭಾಗವಹಿಸುವುದರಿಂದ ದೂರವಿರುವುದು. ಸಮಾರಂಭಗಳು, ಹೋಟೆಲ್‌, ಬಾರ್ ಅಂಡ್ ರೆಸ್ಟೋರೆಂಟ್ಸ್, ರೆಸಾಟ್ಸ್, ಪಬ್, ಕ್ಲಬ್ ಮತ್ತು ಇತ್ಯಾದಿಗಳ ಆಯೋಜಕರು, ವ್ಯವಸ್ಥಾಪಕರು ಹಾಗೂ ಸೇವಾ ಸಿಬ್ಬಂದಿಗಳು ಆದ್ಯತೆ ಮೇರೆಗೆ ಬೂಸ್ಟರ್ ಡೋಸ್ ಅನ್ನು ಪಡೆಯುವುದು. ಕನಿಷ್ಠ ಎರಡು ಡೋಸ್ ಲಸಿಕೆಗಳನ್ನು ಪಡೆಯುವುದನ್ನು ನಿರೀಕ್ಷಿಸಲಾಗಿದೆ.

ಇನ್ನು ಸಿನಿಮಾ ಮಂದಿರಗಳಿಗೆ ಚಲನಚಿತ್ರಗಳನ್ನು ವೀಕ್ಷಿಸಲು ಹೋಗುವ ಪ್ರತಿಯೊಬ್ಬ ಪ್ರೇಕ್ಷಕರು N-95 ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು. ಈ ಬಗ್ಗೆ ಪವೇಶ ದ್ವಾರದಲ್ಲಿರುವ ಸಿಬ್ಬಂದಿಗಳು ಪ್ರೇಕ್ಷಕರಿಗೆ ತಿಳಿ ಹೇಳಲು ಸೂಚಿಸಲಾಗಿದೆ.

- Advertisement -

Related news

error: Content is protected !!