Monday, May 6, 2024
spot_imgspot_img
spot_imgspot_img

ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ವರ್ಗಾವಣೆ; ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ

- Advertisement -G L Acharya panikkar
- Advertisement -

ಉಡುಪಿ: ಕಳೆದ 2 ವರ್ಷಗಳಿಂದ ಉಡುಪಿಯ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸುತಿದ್ದ ಜಿ. ಜಗದೀಶ್ ಅವರನ್ನು ಇಂದು ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಎಂಡಿ ಅಗಿ ಕಾರ್ಯನಿರ್ವಹಿಸುತಿದ್ದ ಕುರ್ಮಾ ರಾವ್(ಐಎಎಸ್) ಇವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ಆಗಿ ಸರಕಾರ ನೇಮಿಸಿದೆ. ಜಿ. ಜಗದೀಶ್ ರವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕಳೆದ 2 ವರ್ಷಗಳಿಂದ ಜಿ. ಜಗದೀಶ್ ಉಡುಪಿಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಸ್ನೇಹಿಯಾಗಿದ್ದರು. ಕೊರೊನಾ ಸಂಧರ್ಭದಲ್ಲಿ ಜಿಲ್ಲೆಯ ಜನತೆಯ ಆತ್ಮ ಸ್ಥೈರ್ಯವನ್ನು ಹೆಚ್ಚಿಸುವ ಸಲುವಾಗಿ ಜನರೊಂದಿಗೆ ನೇರ ಸಂಪರ್ಕವನ್ನು ಇರಿಸಿಕೊಂಡಿದ್ದರು. ಜನ ಸಾಮಾನ್ಯರೂ ಕೂಡಾ ನೇರವಾಗಿ ಜಿಲ್ಲೆಯ ಜಿಲ್ಲಾದಿಕಾರಿಗಳನ್ನು ಭೇಟಿಯಾಗುವ ಅವಕಾಶವನ್ನು ಜಿ.ಜಗದೀಶ್ ಅವರು ಕಲ್ಪಿಸಿದ್ದರು.ಕೊರೊನಾ ಮೊದಲನೆ ಮತ್ತು ಎರಡನೆ ಅಲೆಯನ್ನು ಸಮರ್ಥವಾಗಿ ನಿರ್ವಹಿಸಲು ಜಿಲ್ಲಾಧಿಕಾರಿಯಾಗಿ ಯಶಸ್ವಿಯಾಗಿದ್ದರು.

ಆದರೆ ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ಕೆಲವೊಂದು ಘಟನೆಗಳಿಂದಾಗಿ ಜಿ ಜಗದೀಶ್ ಅವರು ಸಾರ್ವಜನಿಕ ವಲಯದಿಂದ ಟೀಕೆಗಳನ್ನು ಎದುರಿಸಬೇಕಾಯಿತು.

ಪ್ರಸ್ತುತ ಈಶಾನ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಯಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ ಐಎಎಸ್ ಶ್ರೇಣಿಯ ಕೂರ್ಮಾ ರಾವ್ ಇವರನ್ನು ನೂತನ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ನೀಡಲಾಗಿದೆ.

driving
- Advertisement -

Related news

error: Content is protected !!