Monday, September 28, 2026
spot_imgspot_img
spot_imgspot_img

ಉಡುಪಿ: ನಾಳೆಯಿಂದ ಮದುವೆ, ಸಭೆ ಸಮಾರಂಭಗಳಲ್ಲಿ 300ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ; ಜಿಲ್ಲಾಧಿಕಾರಿ..!!

- Advertisement -
- Advertisement -
vtv vitla
vtv vitla

ಉಡುಪಿ: ಓಮಿಕ್ರಾನ್ ಮುಂಜಾಗೃತಾ ಕ್ರಮವಾಗಿ ನಾಳೆಯಿಂದ (ಡಿ.28) ಜ.7ರವರೆಗೆ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು, ಜಿಲ್ಲೆಯಲ್ಲಿ ಡಿ.28 ರಿಂದ ಜ.7 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇದರಲ್ಲಿ ವಿಶೇಷವಾಗಿ ಡಿ. 30 ರಿಂದ ಜ. 2 ರ ವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು 50 ಶೇ. ದಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಉಳಿದಂತೆ ಡಿ.28 ರಿಂದ ಎಲ್ಲಾ ಸಭೆ ಸಮಾರಂಭ, ಸಮ್ಮೇಳನ, ಮದುವೆ ಇತ್ಯಾದಿ ಸಮಾರಂಭಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 300 ಜನರಿಗೆ ಸೀಮಿತಗೊಳಿಸಲಾಗಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿದ್ದಾರೆ.

ನೈಟ್ ಕರ್ಫ್ಯೂನ ಅವಧಿಯಲ್ಲಿ ರಾತ್ರಿ 10 ಗಂಟೆಯಿಂದ ಮರುದಿನ ಬೆಳಿಗ್ಗೆ 5 ಗಂಟೆವರೆಗೆ ಜಿಲ್ಲೆಯಾದ್ಯಂತ ಅಗತ್ಯ ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

vtv vitla
vtv vitla

ಈ ಅವಧಿಯಲ್ಲಿ ವೈದ್ಯಕೀಯ, ತುರ್ತು ಹಾಗೂ ಔಷಧಾಲಯಗಳನ್ನು ಒಳಗೊಂಡ ಅವಶ್ಯಕ ಸೇವೆಗಳು ಯಥಾ ರೀತಿಯಲ್ಲಿ ಸರಕಾರದ ನಿಯಮಗಳೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೂ ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರೊಂದಿಗೆ ತುರ್ತು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿ ನೀಡಲಾಗಿದೆ. ನೈಟ್ ಕರ್ಫ್ಯೂನ ಅವಧಿಯಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿಸಲಾಗಿದೆ. ಹಾಗೂ ಎಲ್ಲಾ ತರಹದ ಟ್ರಕ್ ಗಳಲ್ಲಿ ಸಾಗಿಸುವ ಸರಕಗಳು, ಸರಕು ವಾಹನ ಅಥವಾ ಇತರ ಸರಕು ಸಾಗಾಟ ವಾಹನಗಳು ಖಾಲಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇ-ಕಾಮರ್ಸ್ ಕಂಪನಿಗಳು ಹಾಗೂ ಹೋಮ್ ಡೆಲಿವರಿ ಕೆಲಸವನ್ನು ಮುಂದುವರೆಸಲು ಅನುಮತಿ ನೀಡಲಾಗಿದೆ.

vtv vitla
vtv vitla

ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು/ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಹಾಗೂ ಅಂತಹ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಥೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ, ಅನುಮತಿಗೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸುವ ಮೂಲಕ ಸಂಚಾರಿಸ ಬಹುದಾಗಿದೆ. ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಒದಗಿಸುವ ನೌಕರರು ಹಾಗೂ ವಾಹನಗಳನ್ನು ತಮ್ಮ ಸಂಸ್ಥೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯನ್ನು ಸಲ್ಲಿಸಿ ಸಂಚಾರಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಆಧಾರಿತ ಕಂಪನಿ/ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಅಗತ್ಯ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕಾರ್ಯನಿರ್ವಹಿಸಲು ಪ್ರೋತ್ಸಾಹ ನೀಡಲಾಗಿದೆ.

ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ವಿಮಾನ ನಿಲ್ದಾಣಗಳಿಂದ, ರೈಲ್ವೆ ನಿಲ್ದಾಣಗಳಿಂದ, ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಹಾಗೂ ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು/ ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಮಾರ್ಗ ಸೂಚಿಯಲ್ಲಿ ತಿಳಿಸಲಾಗಿದೆ.

ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ಧ, ಭಾರತ ದಂಡ ಸಂಹಿತೆಯ 188ನೇ ಪ್ರಕರಣದಡಿ ಹಾಗೂ ವಿಪತ್ತು ನಿರ್ವಹಣಾ ಅಧಿನಿಯಮ, 2005ರ ಸೆಕ್ಷನ್ 151 ರಿಂದ 66ರನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

suvarna gold
- Advertisement -

Related news

error: Content is protected !!