Saturday, June 28, 2025
spot_imgspot_img
spot_imgspot_img

ಉಡುಪಿ: ಬಸ್ಸಿಗೆ ಢಿಕ್ಕಿ ಹೊಡೆದ ಟೆಂಪೋ; ಚಾಲಕನಿಗೆ ಗಂಭೀರ ಗಾಯ

- Advertisement -
- Advertisement -

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಉಡುಪಿಯ ಶಿರಿಬೀಡುವಿನಲ್ಲಿ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಟಾಟಾ ಏಸ್ ಟೆಂಪೋ ಶಿರಿಬೀಡು ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದೆ. ಹತೋಟಿ ಕಳೆದುಕೊಂಡ ಚಾಲಕ ಎದುರಿಗಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಟೆಂಪೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಉಡುಪಿ ನಗರ ಸಂಚಾರಿ ಠಾಣಾ ಪೋಲಿಸರು ಸ್ಥಳಕ್ಕೆ ಭೇಟಿ‌ ನೀಡಿ ಸುಗಮ‌ ಸಂಚಾರಕ್ಕೆ ಅವಕಾಶ‌ ಮಾಡಿದರು.

- Advertisement -

Related news

error: Content is protected !!