Sunday, June 14, 2026
spot_imgspot_img
spot_imgspot_img

ಉಡುಪಿ: ಬಸ್‌ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಉಡುಪಿ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ.

ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್ ಸವಾರ ವಿರುದ್ಧ ದಿಕ್ಕಿನಿಂದ ಬಂದ ಪರಿಣಾಮ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಬೇರೊಂದು ಬಸ್ ಮೂಲಕ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!