Friday, June 19, 2026
spot_imgspot_img
spot_imgspot_img

ಉಡುಪಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ಅಪರಾಧಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

- Advertisement -
- Advertisement -

ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಸಾಹಿಲ್(23) ಶಿಕ್ಷೆಗೆ ಗುರಿಯಾದ ಆರೋಪಿ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ನೊಂದ ಬಾಲಕಿ ಸಾಗರದಲ್ಲಿ ವಾಸ ಮಾಡಿಕೊಂಡಿದ್ದು, ಆರೋಪಿಯು ಅಲ್ಲಿಯೇ ಇದ್ದ ನೊಂದ ಬಾಲಕಿಯ ತಂದೆಯ ಹೊಟೇಲ್ ಬಳಿ ಕೆಲಸ ಮಾಡುತ್ತಿದ್ದನು. ಈ ವೇಳೆ ಆರೋಪಿ ನೊಂದ ಬಾಲಕಿಯನ್ನು ಸಂಪರ್ಕಿಸಿ ಪ್ರೀತಿಸುವುದಾಗಿ ಹೇಳಿದ್ದನು. 2021ರಲ್ಲಿ ಜುಲೈ ತಿಂಗಳಲ್ಲಿ ನೊಂದ ಬಾಲಕಿಯು ತನ್ನ ಊರಿಗೆ ಬಂದಿದ್ದು, ಆ ಸಮಯ ಆಕೆಯ ಜನ್ಮದಿನದಂದು ಸಾಗರದಿಂದ ಬೈಂದೂರಿಗೆ ಬಂದು ಆತ, ಆಕೆಯನ್ನು ರಾತ್ರಿ ಗುಡ್ಡಕ್ಕೆ ಕರೆದುಕೊಂಡು ಹೋಗಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದನು. ಇದೇ ರೀತಿ ಆರೋಪಿ ನೊಂದ ಬಾಲಕಿಯನ್ನು ಹಲವು ಬಾರಿ ದೈಹಿಕ ಸಂಪರ್ಕ ನಡೆಸಿದ್ದನು.

ಈ ವಿಚಾರ ತಿಳಿದು ನೊಂದ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆಗಿನ ಪೊಲೀಸ್ ನಿರೀಕ್ಷಕ ಸಂತೋಷ್ ಎ.ಕಾಯ್ಕಿಣಿ ಆರೋಪಿಯ ವಿರುದ್ಧ ದೋಷಾ ರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಒಟ್ಟು 25 ಸಾಕ್ಷಿಗಳನ್ನು ಪೈಕಿ 13 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದೆ. ಸಾಂದರ್ಭಿಕ ಸಾಕ್ಷವನ್ನು ಪರಿಗಣಿಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ, 20 ವರ್ಷಗಳ ಕಠಿಣಾ ಶಿಕ್ಷೆ ಮತ್ತು 22,500ರೂ. ದಂಡವನ್ನು ವಿಧಿಸಿ ಆದೇಶ ನೀಡಿದೆ.

ನೊಂದ ಬಾಲಕಿಗೆ 1.50ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಸರಕಾರಕ್ಕೆ ಆದೇಶಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು.

- Advertisement -

Related news

error: Content is protected !!