Monday, May 13, 2024
spot_imgspot_img
spot_imgspot_img

ಉಡುಪಿ: ಬಾವಿಗೆ ಬಿದ್ದ ಚಿರತೆ; ಅರಣ್ಯ ಅಧಿಕಾರಿಗಳಿಂದ ರಕ್ಷಣೆ

- Advertisement -G L Acharya panikkar
- Advertisement -

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ ಮನೆಯೊಂದರ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರ ಸಹಕಾರದಿಂದ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಬಜಗೋಳಿಯ ನಿವಾಸಿಯಾಗಿರುವ ಶ್ರೀನಿವಾಸ ಆಚಾರ್ಯ ಎಂಬವರ ಮನೆಯ ಬಾವಿಗೆ ಚಿರತೆ ಬಿದ್ದಿರುವುದನ್ನು, ಮನೆ ಸದಸ್ಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಬಳಿಕ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು, ಗ್ರಾಮಸ್ಥರ ಸಹಕಾರದಿಂದ ಬೋನು ಬಾವಿಗೆ ಇಳಿಸಿ ಚಿರತೆಯನ್ನು ಮೇಲೆತ್ತಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಇನ್ನು ಚಿರತೆ ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದಿರುವ ಸಾಧ್ಯತೆ ಹೆಚ್ಚಾಗಿದ್ದು , ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದೇ ಸಂದರ್ಭ ಗ್ರಾಮದಲ್ಲಿ ಚಿರತೆ ದಾಳಿಯಿಂದ ಯಾವುದೇ ಅನಾಹುತವಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!