Saturday, April 20, 2024
spot_imgspot_img
spot_imgspot_img

ಉಡುಪಿ: ಬ್ರಹ್ಮಗಿರಿ ವೃತ್ತದಲ್ಲಿ ಸಾರ್ವಕರ್‌ ಪುತ್ಥಳಿ ಸ್ಥಾಪನೆಗೆ ನಗರ ಸಭೆಗೆ ಮನವಿ ಸಲ್ಲಿಸಿದ ಯಶ್‌ಪಾಲ್‌ ಸುವರ್ಣ

- Advertisement -G L Acharya panikkar
- Advertisement -

ಉಡುಪಿ: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ನಗರ ಸಭೆಗೆ ಮನವಿ ಸಲ್ಲಿಸಲಾಗಿದೆ.

ಬ್ರಹ್ಮಗಿರಿ ಸರ್ಕಲ್ ನಲ್ಲಿ ವೀರ ಸಾವರ್ಕರ್‌ನ ಫ್ಲೆಕ್ಸ್‌ ಅಳವಡಿಕೆಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪುತ್ಥಳಿ ಸ್ಥಾಪನೆಗೆ ಅನುಮತಿ ಕೋರಿ ನಗರಸಭೆಗೆ ಪತ್ರ ಬರೆದಿದ್ದಾರೆ. ಫ್ಲೆಕ್ಸ್ ಅಳವಡಿಸಲು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದಾಗ ಪ್ರತಿಮೆ ಸ್ಥಾಪಿಸುವುದಾಗಿ ಯಶ್‌ಪಾಲ್ ಸುವರ್ಣ ಘೋಷಿಸಿದ್ದರು.

ಈ ಬಗ್ಗೆ ನಿನ್ನೆ ಸಲ್ಲಿಸಿರುವ ಮನವಿಯಲ್ಲಿ ಉಡುಪಿ ನಗರಸಭೆ ಅಜ್ಜರಕಾಡು ವ್ಯಾಪ್ತಿಯ ಬ್ರಹ್ಮಗಿರಿ ವೃತ್ತದಲ್ಲಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಯಲ್ಲಿ ಹೋರಾಟ ನಡೆಸಿದ ಹೋರಾಟಗಾರ ಸಾವರ್ಕರ್ ರವರ ಪುತ್ಥಳಿ ನಿರ್ಮಿಸಿ ವೀರ ಸಾವರ್ಕರ್ ಅವರಿಗೆ ಸಮಸ್ತ ದೇಶ ಪ್ರೇಮಿಗಳ ಪರವಾಗಿ ಗೌರವ ಸಲ್ಲಿಸಲು ನಿರ್ಧರಿಸಿದ್ದೇವೆ.

ಭಾರತ ಸ್ವಾತಂತ್ರ್ಯಗೊಂಡು 75 ಸಂವತ್ಸರಗಳನ್ನು ಪೂರೈಸಿರುವ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಷರ ಪಾಲಿಗೆ ಸಿಂಹಸ್ವಪ್ನರಾಗಿದ್ದ ವೀರ ಸಾವರ್ಕರ್ ಪುತ್ಥಳಿ ನಿರ್ಮಾಣಕ್ಕೆ ಅತ್ಯಂತ ಸಮಂಜಸ ಸಮಯ ಬಂದೊದಗಿದ್ದು, ನಗರ ಸಭೆಯ ಮೂಲಕ ಈ ಪುತ್ಥಳಿ ಅಳವಡಿಸಲು ಅನುಮತಿ ನೀಡಬೇಕಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಯಶಪಾಲ್‌ ಸುವರ್ಣ,ಉಡುಪಿ ನಗರಸಭೆಯ ಅಧ್ಯಕ್ಷರು ಮತ್ತು ಪೌರಾಯುಕ್ತರಿಗೆ ಪತ್ರ ಬರೆದಿದ್ದಾರೆ.

- Advertisement -

Related news

error: Content is protected !!