Friday, May 3, 2024
spot_imgspot_img
spot_imgspot_img

ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆ ಬ್ರೇಕ್‌ ಹಾಕಲು ಫೀಲ್ಡ್‌ಗಿಳಿದ ಇಳಿದ ಎಸ್ಪಿ; ಇಬ್ಬರು ಪಿಂಪ್‌ಗಳು ವಶಕ್ಕೆ

- Advertisement -G L Acharya panikkar
- Advertisement -

ಉಡುಪಿ: ಸಾರ್ವಜನಿಕ ದೂರಿನ ಮೇರೆಗೆ ನಗರದ ಸಿಟಿ ಬಸ್‌ ನಿಲ್ದಾಣದ ಬಳಿ ನಡೆಯುತ್ತಿದ್ದ ಮಂಗಳಮುಖಿಯರ ಅನೈತಿಕ ದಂಧೆ ತಡೆಯಲು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚಿಂದ್ರ ಅವರೇ ಕಾರ್ಯಚರಣೆಗೆ ನಡೆಸಿ, ತಡರಾತ್ರಿ ಇಬ್ಬರು ಪೊಂಪ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ಪೊಲೀಸ್ ವರಿಷ್ಠಾಧಿಕಾರಿ ಅವರೇ ಸ್ಥಳಕ್ಕೆ ದಾಳಿ ನಡೆಸಿದ್ದರು. ಕಾರ್ಯಾಚರಣೆ ಸಂದರ್ಭದಲ್ಲಿ ಸ್ಥಳದಲ್ಲಿ ಇದ್ದಿದ್ದು ಪೊಲೀಸ್ ಅಧೀಕ್ಷಕರು ಎಂದು ತಿಳಿಯದೆ ಮಂಗಳ ಮುಖಿಯರು ಅವರ ಜೊತೆಗೆ ವಾಗ್ವಾದ ನಡೆಸಿದ್ದರು. ಮಾತ್ರವಲ್ಲದೆ ಅವಾಚ್ಯ ಶಬ್ದಗಳಿಂದ ಎಸ್ಪಿ ಅವರಿಗೆ ಬೈದು ನಿಂದಿಸಿದ್ದಾರೆ ಎನ್ನಲಾಗಿದೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎಲ್ಲರನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದರು.

ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ಬಸ್ ನಿಲ್ದಾಣದ ಸಮೀಪ ಆನೈತಿಕ ದಂಧೆಯಲ್ಲಿ ತೊಡಗಿಸಿಕೊಂಡಿರುವ ಕೆಲವು ಮಂಗಳಮುಖಿಯರು, ವಾಹನ ಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಾರೆ.ದಾರಿದೀಪವನ್ನು ಒಡೆದು ಹಾಕಿದ್ದಾರೆ ಮತ್ತು ಜನರಿಂದ ಹಣ ವಸೂಲಿ ಮಾಡುತ್ತಾರೆಂಬ ಸಾರ್ವಜನಿಕ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಎಸ್ಪಿ ಈ ಕಾರ್ಯಾಚರಣೆಗೆ ಇಳಿದಿದ್ದರು. ಸ್ವತಃ ಎಸ್ಪಿಯವರೇ ಸ್ಥಳಕ್ಕೆ ಆಗಮಿಸಿ ಮಂಗಳಮುಖಿಯನ್ನು ಅಲ್ಲಿಂದ ತೆರವುಗೊಳಿಸಲು ಮುಂದಾದರು. ಇದೇ ವೇಳೆ ಗ್ರಾಹಕರನ್ನು ರಿಕ್ಷಾದಲ್ಲಿ ಕರೆ ತಂದು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದ ಇಬ್ಬರು ಪಿಂಪ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ, ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!