Saturday, April 20, 2024
spot_imgspot_img
spot_imgspot_img

ಉಡುಪಿ:  ಮನೆಗೆ ನುಗ್ಗಿ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ಎಂಬಲ್ಲಿ ಆರು ತಿಂಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಕಕ್ಕುಂಜೆ ಗರಡಿ ದೇವಸ್ಥಾನದ ಹತ್ತಿರ ನಿವಾಸಿ ಸಂತೋಷ್ ಪೂಜಾರಿ (36) ಹಾಗೂ ಕಟಪಾಡಿ ಮಟ್ಟು ನಿವಾಸಿ ರಾಕೇಶ್(37) ಎಂದು ಗುರುತಿಸಲಾಗಿದ್ದು, ಅವರಿಂದ 2,18,169 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜನವರಿ 21ರಂದು ರಾತ್ರಿ ವೇಳೆ ಕಕ್ಕುಂಜೆಯ ಪ್ರಮೀಳಾ ಬಂಗೇರಾ ಎಂಬವರ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಒಟ್ಟು 9 ಪವನ್ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಇವರ ಮನೆಗೆ ಬರುತ್ತಿದ್ದ ಸಂತೋಷ್‌ನ ಮೇಲೆ ಸಂಶಯ ಇರುವುದಾಗಿ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನು ಆರೋಪಿ ಪತ್ತೆಗಾಗಿ ನಿಯೋಜಿಸಲಾದ ನಗರ ಠಾಣೆಯ ಎಸ್ಸೈ ಪ್ರಸಾದ್ ಕುಮಾರ್ ಹಾಗೂ ಸಿಬ್ಬಂದಿ ಸತೀಶ್ ಬೆಳ್ಳೆ, ಕಿರಣ್ ಅವರ ತಂಡ ಸಂತೋಷ್ ಪೂಜಾರಿಯನ್ನು ಉಡುಪಿ ಕೃಷ್ಣ ಮಠದ ಗೀತಾ ಮಂದಿರ ಬಳಿ ಮತ್ತು ರಾಕೇಶ್ ಪಾಲನ್‌ನ್ನು ಉಡುಪಿ ಉಜ್ವಲ್ ಬಾರ್ ಎದುರು ಬಂಧಿಸಿ, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಗಳಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

- Advertisement -

Related news

error: Content is protected !!