Saturday, May 18, 2024
spot_imgspot_img
spot_imgspot_img

ಉಡುಪಿ: ಮನೆಯಲ್ಲಿ ತಾಯಿ-ಮಗಳ ಮೃತದೇಹ ಪತ್ತೆ; ಕೊಲೆ ಶಂಕೆ; ಪ್ರಕರಣ ದಾಖಲು..!

- Advertisement -G L Acharya panikkar
- Advertisement -

ಉಡುಪಿ: ಉಡುಪಿಯ ಆತ್ರಾಡಿ ಮದಗದ ಬಳಿ ಇರುವ ಮನೆಯೊಂದರಲ್ಲಿ ತಾಯಿ ಮಗಳ ಶವ ಪತ್ತೆಯಾಗಿದ್ದು , ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಮೃತರನ್ನು ತಾಯಿ ಚೆಲುವಿ(30), ಮಗಳು ಪ್ರಿಯಾ (10) ಎಂದು ಗುರುತಿಸಲಾಗಿದೆ.

vtv vitla
vtv vitla

ಮನೆಯ ಕೋಣೆಯಲ್ಲಿ ತಾಯಿ – ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹಗಳ ಬಾಯಿಯಲ್ಲಿ ರಕ್ತದ ಕಲೆ ಕಂಡುಬಂದಿರುವುದು ಸಂಶಯಕ್ಕೆ ಎಡೆಮಾಡಿದೆ.

ಮಣಿಪಾಲ ಖಾಸಗಿ ಸಂಸ್ಥೆಯಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡುತ್ತಿದ್ದ ಮಹಿಳೆ , ಮಗಳೊಂದಿಗೆ ವಾಸವಾಗಿದ್ದರು. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಮತ್ತುಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಭೇಟಿ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!