Tuesday, May 7, 2024
spot_imgspot_img
spot_imgspot_img

ಉಡುಪಿ: ಮನೆಯಿಂದ ಹೊರಹೋದ ಯುವತಿ ನಾಪತ್ತೆ; ಪತ್ತೆಗಾಗಿ ಮನವಿ

- Advertisement -G L Acharya panikkar
- Advertisement -
vtv vitla

ಉಡುಪಿ: ಮನೆಯಿಂದ ಹೊರಗೆ ಹೋದ ಯುವತಿಯೋರ್ವಳು ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ.

ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!