Wednesday, September 23, 2026
spot_imgspot_img
spot_imgspot_img

ಉಡುಪಿ: ಮಲ್ಪೆ ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಯುವಕ ಮೃತ್ಯು

- Advertisement -
- Advertisement -

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಸಾವನ್ನಪ್ಪಿದ ಯುವಕ ಬೆಂಗಳೂರು ಮೂಲದ ಸಾಮ್ರಾಟ್‌ ಎಂದು ಗುರುತಿಸಲಾಗಿದೆ.

ಒಟ್ಟು 9 ಮಂದಿ ಮದುವೆಯ ಕಾರ್ಯಕ್ರಮಕ್ಕೆಂದು ಉಡುಪಿಗೆ ಬಂದಿದ್ದು, ಮಲ್ಪೆ ಬೀಚ್‌ನಲ್ಲಿ ಆಟವಾಡುತ್ತಿದ್ದ ವೇಳೆ ನೀರಿಗೆ ಬಿದ್ದರು.

ಈ ಘಟನೆ ಬೀಚ್‌ನ ಉತ್ತರ ಭಾಗದಲ್ಲಿ ನಡೆದಿದ್ದು ಬೀಚ್‌ನ ಲೈಪ್‌ಗಾರ್ಡ್‌ ಮತ್ತು ಸ್ಥಳೀಯರು ತತ್‌ಕ್ಷಣ ಅವರನ್ನು ನೀರಿನಿಂದ ಮೇಲೆ ತಂದು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದರೂ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ, ಕೇಸು ದಾಖಲಿಸಿಕೊಂಡಿದ್ದಾರೆ

- Advertisement -

Related news

error: Content is protected !!