Saturday, April 20, 2024
spot_imgspot_img
spot_imgspot_img

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಆತ್ಮಹತ್ಯೆ; ಐವರ ವಿರುದ್ದ ಎಫ್ಐಆರ್‍ ದಾಖಲು

- Advertisement -G L Acharya panikkar
- Advertisement -

ಉಡುಪಿ ಮಾ.10 : ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಬ್ಬಣ್ಣ (50) ಪರಿಶಿಷ್ಟ ಜಾತಿಗೆ ಸೇರಿದ್ದು, ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ್ ಲಾಡ್ಜ್ ನಲ್ಲಿ ಸುಬ್ಬಣ್ಣ ಅವರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಮೃತದೇಹದ ಬಳಿ ಡೆತ್ ನೋಟ್ ಕೂಡಾ ದೊರಕಿದ್ದು, ಸಾವಿಗೆ ಬ್ಯಾಂಕಿನ ಆಡಳಿತ ಮಂಡಳಿಯ ಒತ್ತಡ ಮೇಲಾಧಿಕಾರಿಯ ಅಸಹಕಾರ ಮತ್ತು ಸಾಲಗಾರನ ಮೋಸದ ನಡವಳಿಕೆ ಕಾರಣ ಎಂದು ಬರೆದಿದ್ದಾರೆ.

ಈ ಸಾವಿನ ಬಗ್ಗೆ ಸಂಶಯ ಇದ್ದು, ಮೃತರ ಸಹೋದರ ಸುರೇಶ್ ಕೆ. ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಸುವರ್ಣ, ಆಡಳಿತ ನಿರ್ದೇಶಕ ಜಗದೀಶ್ ಮೊಗವೀರ, ಮಾಜಿ ಆಡಳಿತ ನಿರ್ದೇಶಕ ಜೆ.ಕೆ ಸೀನ ಗಂಗೊಳ್ಳಿ, ಮ್ಯಾನೇಜರ್ ಸಾರಿಕಾ, ಸಾಲಗಾರ ರಿಯಾಝ್ ನೀಡಿದ ಮಾನಸಿಕ ಒತ್ತಡ ಹಾಗೂ ಬ್ಯಾಂಕಿನ ಆಡಳಿತ ಮಂಡಳಿ ಸಾಲ ವಸೂಲಾತಿಯನ್ನು ಮಾಡಿ ಕೊಡದಿದ್ದರೆ ನಿನ್ನ ಮನೆಯನ್ನಾದರೂ ಮಾರಿ ಬ್ಯಾಂಕಿನ ಸಾಲವನ್ನು ತೀರಿಸಬೇಕು, ಇಲ್ಲದಿದ್ದಲ್ಲಿ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.

ಆಡಳಿತ ಮಂಡಳಿ ಮತ್ತು ಸಾಲಗಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ನೀಡಿದ ದೂರಿನಂತೆ ಆರೋಪಿಗಳಾದ ಐವರನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿದೆ.

- Advertisement -

Related news

error: Content is protected !!